ಬೇಸಿಗೆಯಲ್ಲಿ Power cut ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಸಚಿವ ಕೆ.ಜೆ ಜಾರ್ಜ್‌

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕಾಗಿ ಎಲ್ಲಾರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಬುಧವಾರ ಹೇಳಿದರು.
ಕೆ.ಜೆ. ಜಾರ್ಜ್‌
ಕೆ.ಜೆ. ಜಾರ್ಜ್‌

ಬೆಂಗಳೂರು: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕಾಗಿ ಎಲ್ಲಾರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಬುಧವಾರ ಹೇಳಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರ, ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿಯೇ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಯಾವುದೇ ವರ್ಗದ ಗ್ರಾಹಕರಿಗೆ ಲೋಡ್‌ ಶೆಡ್ಡಿಂಗ್‌ ಬಿಸಿ ತಟ್ಟದಂತೆ ಇಲಾಖೆ ಎಚ್ಚರವಹಿಸಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರತಿ ದಿನದ ವಿದ್ಯುತ್ ಬಳಕೆ 329 ಮಿಲಿಯನ್ ಯೂನಿಟ್‌ನಷ್ಟಿದ್ದು – ಹಿಂದಿನ ವರ್ಷ ಇದೇ ಅವಧಿಯ ವಿದ್ಯುತ್‌ ಬಳಕೆ ಪ್ರಮಾಣ 300 ಮಿ.ಯೂ. ನಷ್ಟಿತ್ತು. ಕಳೆದ ವರ್ಷದ ಗರಿಷ್ಠ ಲೋಡ್ 15300+ ಮೆ.ವ್ಯಾ.ಆಗಿದ್ದರೆ, ಈ ವರ್ಷದ ಗರಿಷ್ಠ ಲೋಡ್ 17000+ ಮೆ.ವ್ಯಾ.ಗೆ ಏರಿದೆ.

ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗದಂತೆ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ವಿದ್ಯುತ್‌ ಪೂರೈಕೆಗೆ ಆದೇಶ ನೀಡಲಾಗಿದೆ. ಬೇಸಿಗೆ ಕಾರಣದಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೆ.ಜೆ. ಜಾರ್ಜ್‌
ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಎದುರಾಗುವುದಿಲ್ಲ: ಇಂಧನ ಸಚಿವ ಕೆಜೆ ಜಾರ್ಜ್

ಇಂಧನ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ವಿದ್ಯುತ್'ಗೆ ಬೇಡಿಕೆ ಹೆಚ್ಚುತ್ತಿದ್ದು, ಖರೀದಿ, ವ್ಯಾಪಾರ, ಕೇಂದ್ರ ಮತ್ತು ರಾಜ್ಯ ಉತ್ಪಾದನೆ ಸೇರಿದಂತೆ ಸಾಧ್ಯವಿರುವ ಎಲ್ಲ ಮೂಲಗಳ ಮೂಲಕ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇಂಧನ ಇಲಾಖೆಯ ಮತ್ತೊಬ್ಬ ಅಧಿಕಾರಿ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ವಿದ್ಯುತ್ ಉತ್ಪಾದನೆ ಇದೇ ರೀತಿಯೇ ಇದೆ. ತಾಪಮಾನದ ಏರಿಕೆ ಮತ್ತು ಮಳೆ ಅಭಾವದಿಂದಾಗಿ ಮನೆಗಳು ಮತ್ತು ರೈತರ ನೀರಾವರಿ ಪಂಪ್ ಸೆಟ್‌ಗಳಿಗೆ ಹೆಚ್ಚಿನ ವಿದ್ಯುತ್ ಬೇಕಾಗುತ್ತಿದೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಬೇಡಿಕೆಯಲ್ಲಿ ಹೆಚ್ಚಳವನ್ನು ನಿರೀಕ್ಷಿಸಿದ್ದೆವು. ಇದಕ್ಕಾಗಿ ಈ ಹಿಂದೆಯೇ ಕೆಲಸ ಆರಂಭಿಸಿದ್ದೆವು. 1500- 1800MW ಬೇಡಿಕೆ ಹೆಚ್ಚಳವಾದರೂ ಪರಿಸ್ಥಿತಿ ಎದುರಿಸಲು ಸಿದ್ಧರಿದ್ದೇವೆ. ಹೈಡಲ್ ಹೊರತುಪಡಿಸಿ ಉಳಿದೆಲ್ಲ ವಿದ್ಯುತ್ ಮೂಲಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com