ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳ ಒತ್ತಾಯ: ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದ ಪ್ರಹ್ಲಾದ್ ಜೋಶಿ

ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳು ಗಡುವು ನೀಡಿದ್ದು, ಇದರ ಬೆನ್ನಲ್ಲೇ ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದು ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಪ್ರಲ್ಹಾದ ಜೋಶಿ.
ಹುಬ್ಬಳ್ಳಿಯಲ್ಲಿ ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಪ್ರಲ್ಹಾದ ಜೋಶಿ.

ಹುಬ್ಬಳ್ಳಿ: ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳು ಗಡುವು ನೀಡಿದ್ದು, ಇದರ ಬೆನ್ನಲ್ಲೇ ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದು ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ.

ಬುಧವಾರ ಹುಬ್ಬಳ್ಳಿ ಮೂರುಸಾವಿರಮಠದ ಆವರಣದಲ್ಲಿ ವಿವಿಧ ಮಠಾಧೀಶರು ಚಿಂತನ ಮಂಥನ ಸಭೆ ನಡೆಸಿದರು. ಸಭೆಯಲ್ಲಿ ಧಾರವಾಡದಿಂದ ಜೋಶಿ ಅವರ ನಾಮಪತ್ರ ಸಲ್ಲಿಕೆ ವಿರೋಧಿಸಲು ನಿರ್ಧರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರಿದರು.

ಧಾರವಾಡ ಕ್ಷೇತ್ರಕ್ಕೆ ಪ್ರಹ್ಲಾದ್‌ ಜೋಶಿ ಬದಲಿಗೆ ಸೂಕ್ತ ಅಭ್ಯರ್ಥಿಯನ್ನು ಹಾಕಬೇಕು. ಮಾರ್ಚ್‌ 31ರೊಳಗೆ ಅಭ್ಯರ್ಥಿಯನ್ನು ಬದಲಾವಣೆ ಮಾಡದೇ ಹೋದರೆ ಏಪ್ರಿಲ್ 2ರಂದು ಮತ್ತೆ ಸಭೆ ನಡೆಸುತ್ತೇವೆ. ಮತ್ತೊಮ್ಮೆ ಸಭೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಚುನಾವಣಾ ಬಂದಾಗ ಮಾತ್ರ ಕೇಂದ್ರ ಸಚಿವರಿಗೆ ವೀರಶೈವ ಲಿಂಗಾಯತ ಸ್ವಾಮೀಜಿಗಳು ನೆನಪು ಆಗುತ್ತಾರೆ ಎಂದು ಹೇಳಿದ್ದರು.

ಹುಬ್ಬಳ್ಳಿಯಲ್ಲಿ ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಪ್ರಲ್ಹಾದ ಜೋಶಿ.
ಲೋಕಸಭೆ ಚುನಾವಣೆ 2024: ಪ್ರಹ್ಲಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ ಪಟ್ಟು; ಸಾಧ್ಯವಿಲ್ಲ ಎಂದ BSY!

ಸಭೆಯಲ್ಲಿ ಧಾರವಾಡ ಲೋಕಸಭಾ ಚುನಾವಣೆ ಸೇರಿ ದಕ್ಷಿಣ ಭಾರತದಲ್ಲಿ ನಡೆಯುವ ವಿವಿಧ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧೆ ಮಾಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಪ್ರಸ್ತುತ ರಾಜಕೀಯ ವಿದ್ಯಾಮಾನ, ರಾಜ್ಯದ ಅಭಿವೃದ್ಧಿ ಹಾಗೂ ಇನ್ನಿತರ ಕುರಿತು ಚರ್ಚೆ ನಡೆಸಲಾಗಿದೆ. ಆದರೆ, ಧಾರವಾಡ ಲೋಕಸಭಾ ಚುನಾವಣೆಗೆ ತಮ್ಮನ್ನು ಕಣಕ್ಕೆ ಇಳಿಸುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ನಾಡಿನ ಅನೇಕ ಮಠಗಳ ಮಠಾಧೀಶರರು ಚಿಂಥನ ಮಂಥನ ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿಸಿದ್ದರು. ಆದರೆ, ಈ ಒತ್ತಾಯದಿಂದ ಧಾರವಾಡ ಮುರುಘಾ ಮಠದ ಶ್ರೀಗಳು ಮಾತ್ರ ದೂರ ಉಳಿದಿದ್ದು, ಎದ್ದು ಕಾಣುತ್ತಿತ್ತು.

ಈ ನಡುವೆ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿಯವರು, ದಿಂಗಾಲೇಶ್ವರ ಸ್ವಾಮೀಜಿ ಹಾಗೂ ಶಿರಹಟ್ಟಿ ಪೀಠ ನನಗೆ ಸದಾಕಾಲ ಆಶೀರ್ವಾದ ಮಾಡಿದೆ. ಸ್ವಾಮೀಜಿಗಳಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯಲ್ಲ ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಪ್ರಲ್ಹಾದ ಜೋಶಿ.
ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿರುವುದಕ್ಕೆ ಗ್ಯಾರಂಟಿ ಇಲ್ಲ: ಪ್ರಹ್ಲಾದ್ ಜೋಶಿ

ನಾನು ಲೋಕಸಭಾ ಸದಸ್ಯನಾದ ಮೇಲೆ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಏಳು ಜನ ಲಿಂಗಾಯತರಿಗೆ ಟಿಕೆಟ್ ಕೊಡಲಾಗಿದೆ. ಎಲ್ಲಾ ಸಮುದಾಯಕ್ಕೂ ನಾವು ಅವಕಾಶ ಕೊಟ್ಟಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿಗಳ ಬಗ್ಗೆ ನನಗೆ ಗೌರವ, ಶ್ರದ್ಧೆ ಇದೆ. ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು, ಕಾರ್ಯಕರ್ತರು ಸೇರಿ ಚುನಾವಣೆ ಮಾಡುತ್ತಿದ್ದೇವೆ. ಕ್ಷೇತ್ರದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಮತದಾರರನ್ನು ಭೇಟಿಯಾಗುತ್ತೇವೆ. ದೊಡ್ಡ ಬಹುಮತದಿಂದ ಬಿಜೆಪಿ ಗೆಲ್ಲಲಿದೆ. ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಎಲ್ಲ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಇನ್ನು ಸ್ವಾಮೀಜಿಗಳ ಒತ್ತಾಯದಿದ ದೂರ ಉಳಿದ ಕುರಿತು ಹೇಳಿಕೆ ನೀಡಿರುವ ಮುರುಘಾಮಠದ ಮಲ್ಲಿಕಾರ್ಜುನಶ್ರೀಗಳು, ಸ್ವಾಮೀಜಿ ಹೇಳಿಕೆಗೂ, ಧಾರವಾಡ ಮುರುಘಾಮಠಕ್ಕೂ ಸಂಬಂಧವಿಲ್ಲ. ನಮ್ಮ ಮಠ ಎಂದಿಗೂ ರಾಜಕೀಯ ವಿಚಾರದಲ್ಲಿ ಭಾಗವಹಿಸುವುದಿಲ್ಲ. ಸದ್ಯ ಎದ್ದಿರುವ ವಿವಾದಕ್ಕೂ, ತಮಗೂ ಸಂಬಂಧವಿಲ್ಲವೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com