ಬಳ್ಳಾರಿ: ಏಪ್ರಿಲ್ 12ರಂದು ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುವುದಾಗಿ ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ. ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.
ಬಳ್ಳಾರಿಯಲ್ಲಿ ಪ್ರಚಾರ ನಡೆಸುತ್ತಿರುವ ಶ್ರೀರಾಮುಲು.
ಬಳ್ಳಾರಿಯಲ್ಲಿ ಪ್ರಚಾರ ನಡೆಸುತ್ತಿರುವ ಶ್ರೀರಾಮುಲು.

ಬಳ್ಳಾರಿ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುವುದಾಗಿ ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ. ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.

ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸದಿದ್ದರೂ, ಸಂಡೂರು ಶಾಸಕ ಇ ತುಕಾರಾಂ ಪಕ್ಷದ ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಸಭೆ ನಡೆಸುತ್ತಿದ್ದು, ಪಕ್ಷದ ಟಿಕೆಟ್ ಸಿಗುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.

ಬಲ್ಲ ಮೂಲಗಳ ಪ್ರಕಾರ, ತುಕಾರಾಂ ಅವರು ತಮ್ಮ ಪುತ್ರಿಗೆ ಟಿಕೆಟ್ ಕೊಡಿಸಲು ಯತ್ನ ನಡೆಸಿದ್ದರು. ಆದರೆ, ಸಚಿವ ಸಂತೋಷ್ ಲಾಡ್ ಅವರು ತುಕಾರಾಂ ಅವರನ್ನೇ ಕಣಕ್ಕಿಳಿಯುವಂತೆ ಮನವೊಲಿಸಿದ್ದಾರೆ ಎಂದು ತಿಳಿಸಿವೆ.

ಈ ನಡುವೆ ಹೇಳಿಕೆ ನೀಡಿರುವ ಶ್ರೀರಾಮುಲು ಅವರು, ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುತ್ತೇನೆ. ಇದಕ್ಕೂ ಪೂರ್ವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುವೆ ಎಂದು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಪ್ರಚಾರ ನಡೆಸುತ್ತಿರುವ ಶ್ರೀರಾಮುಲು.
ಶ್ರೀರಾಮುಲು ಸೋದರಿ ಜೆ ಶಾಂತಾಗೆ YSRCP ಟಿಕೆಟ್: ಆಂಧ್ರದ ಹಿಂದೂಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ!

ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ವಿಶ್ವಾಸವಿಲ್ಲ. ಹೀಗಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡುವಲ್ಲಿ ವಿಳಂಬ ಮಾಡುತ್ತಿದೆ. ಈ ಬಾರಿ ಗೆಲ್ಲುವ ವಿಶ್ವಾಸವಿದ. ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ನೋಡಬೇಕೆಂದು ಬಯಸಿರುವ ಕ್ಷೇತ್ರದ ಜನತೆ ನನ್ನನ್ನು ಸಂಸದನಾಗಿ ಮಾಡಲು ನಿರ್ಧರಿಸಿದ್ದೇನೆ. ಈ ಹಿಂದೆ ಸಚಿವನಾಗಿ ನಾನು ಮಾಡಿರುವ ಕೆಲಸಗಳೇ ನನ್ನ ಗೆಲುವಿಗೆ ನೆರವಾಗಲಿದೆ ಎಂದು ತಿಳಿಸಿದರು.

ಈಗಾಗಲೇ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸಂಡೂರು ಶಾಸಕ ತುಕಾರಾಂ ಅವರನ್ನು ಕಣಕ್ಕಿಳಿಸುವ ತೀರ್ಮಾನವನ್ನು ಆ ಪಕ್ಷದ ಮುಖಂಡರು ಕೈಗೊಂಡಿದ್ದಾರೆ. ಆದರೆ, ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಇದು ಅವರ ಆಂತರಿಕ ವಿಚಾರ. ಪ್ರಬಲ ನಾಯಕರ ಹುಡುಕುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ತುಕಾರಾಂ ಸ್ಪರ್ಧೆಗಿಳಿದರೂ ಪೈಪೋಟಿಯನ್ನು ಸಮರ್ಥವಾಗಿ ಎದುರಿಸುತ್ತೇನೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com