ಬೆಂಗಳೂರು: ವಿವಿಧ ಪಿಜಿ, ಹೋಟೆಲ್ ಗಳಲ್ಲಿ ಲ್ಯಾಪ್ ಟಾಪ್ ಕಳ್ಳತನ, ರಾಜಸ್ಥಾನ ಮೂಲದ ಮಹಿಳೆ ಬಂಧನ

ವಿವಿಧ ಪಿಜಿ ಮತ್ತು ಹೋಟೆಲ್‌ಗಳಿಂದ ಲ್ಯಾಪ್‌ಟಾಪ್‌ಗಳನ್ನು ಕದ್ದಿದ್ದಕ್ಕಾಗಿ ರಾಜಸ್ಥಾನ ಮೂಲದ 29 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯಿಂದ 10 ಲಕ್ಷ ರೂ. ಮೌಲ್ಯದ 24 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ
ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ
Updated on

ಬೆಂಗಳೂರು: ಬೆಂಗಳೂರಿನ ವಿವಿಧ ಪಿಜಿ ಮತ್ತು ಹೋಟೆಲ್‌ಗಳಿಂದ ಲ್ಯಾಪ್‌ಟಾಪ್‌ಗಳನ್ನು ಕದ್ದಿದ್ದಕ್ಕಾಗಿ ರಾಜಸ್ಥಾನ ಮೂಲದ 29 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯಿಂದ 10 ಲಕ್ಷ ರೂ. ಮೌಲ್ಯದ 24 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ವ್ಯಕ್ತಿಯನ್ನು ಜಸ್ಸು ಅಗರ್ವಾಲ್ ಎಂದು ಗುರುತಿಸಲಾಗಿದೆ. ರಾಜಸ್ಥಾನದಲ್ಲಿ ಬಿಟೆಕ್ ಪದವೀಧರೆಯಾಗಿರುವ ಈಕೆ, 2022 ರಿಂದಲೂ ನಗರದ ಹಲವೆಡೆ ಪಿಜಿಗಳಲ್ಲಿ ಲ್ಯಾಪ್ ಟಾಪ್ ಕಳ್ಳತನ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರು.

ಅಮಾಯಕಳಂತೆ ನಟಿಸಿ ಸಂದರ್ಶನಗಳಿಗೆ ಹಾಜರಾಗುವ ನೆಪದಲ್ಲಿ ಒಂದರಿಂದ ಎರಡು ವಾರಗಳ ಕಾಲ ತಾತ್ಕಾಲಿಕವಾಗಿ ಪಿಜಿಯಲ್ಲಿ ಇರುವುದಾಗಿ ಮಾಲೀಕರ ಮನವೊಲಿಸುತ್ತಿದ್ದ ಈಕೆ, ಬಳಿಕ ತನ್ನ ಕೈಚಳಕ್ಕೆ ಮುಂದಾಗುತ್ತಿದ್ದರು. ಊಟದ ಸಮಯದಲ್ಲಿ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡಿ ಕೆಲವೇ ಕ್ಷಣಗಳಲ್ಲಿ ಪರಾರಿಯಾಗುತ್ತಿದ್ದರು. ಟಿನ್ ಫ್ಯಾಕ್ಟರಿ, ಮಾರತ್ತಹಳ್ಳಿ, ಬೆಳ್ಳಂದೂರು, ಸಿಲ್ಕ್ ಬೋರ್ಡ್, ಹೆಬ್ಬಾಳ, ಮಹದೇವಪುರ ಮತ್ತು ವೈಟ್‌ಫೀಲ್ಡ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇವರು ಕಳ್ಳತನ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ
ಬೆಂಗಳೂರು: ಪತಿಯೊಂದಿಗೆ ಸೇರಿ ಚಿಕ್ಕಮ್ಮನನ್ನು ಕೊಲ್ಲಲು ಯತ್ನಿಸಿದ ಮಹಿಳೆ ಬಂಧನ

ಕಳವು ಮಾಡಲಾದ ಲ್ಯಾಪ್‌ಟಾಪ್‌ಗಳನ್ನು ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳಿಗೆ ತ್ವರಿತವಾಗಿ ಮಾರಾಟ ಮಾಡುತ್ತಿದ್ದಳು, ರೂ 5,000 ರಿಂದ ರೂ 15,000 ವರೆಗಿನ ಗಣನೀಯ ಮೊತ್ತವನ್ನು ಪಡೆಯುತ್ತಿದ್ದಳು. ತರುವಾಯ, ತನ್ನ ಜೇಬುಗಳನ್ನು ತುಂಬಿಕೊಂಡು, ಅಗರ್ವಾಲ್ ರಾಜಸ್ಥಾನದ ತನ್ನ ತವರೂರು ಸೇರುತ್ತಿದ್ದರು. ಜಸ್ಸು ಅಗರ್ವಾಲ್‌ನಿಂದ 24 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com