ಮನೋಜ್ ಕುಮಾರ್ ಮೀನಾ
ಮನೋಜ್ ಕುಮಾರ್ ಮೀನಾ

ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣು: ನಗದು, ಮದ್ಯ, ಉಚಿತ ಉಡುಗೊರೆ ಸೇರಿ 60 ಕೋಟಿ ರೂ. ಮೌಲ್ಯದ ವಸ್ತು ವಶಕ್ಕೆ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಚುನಾವಣೆಯ ಸಂದರ್ಭದಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ನೀಡುತ್ತಿದ್ದ ಉಚಿತ ಉಡುಗೊರೆ, ನಗದು, ಮದ್ಯ ಸೇರಿ 60,38,41,15 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಚುನಾವಣೆಯ ಸಂದರ್ಭದಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ನೀಡುತ್ತಿದ್ದ ಉಚಿತ ಉಡುಗೊರೆ, ನಗದು, ಮದ್ಯ ಸೇರಿ 60,38,41,15 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಕಳೆದ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ಆರ್ಥಿಕವಾಗಿ ಶ್ರೀಮಂತವಾಗಿರುವ ರಾಜ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಈ ಪಟ್ಟಿಯಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿದೆ. ಇಸಿ ಅಧಿಕಾರಿಗಳು ಈ ವರ್ಷವೂ ಇದೇ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗದ ಆಯುಕ್ತ ಮನೋಜ್ ಕುಮಾರ್ ಮೀನಾ ಅವರು ಮಾತನಾಡಿ, ಚುನಾವಣೆಯಲ್ಲಿ ಹಣದ ಬಳಕೆ ಕಳವಳಕಾರಿ ವಿಷಯವಾಗಿದೆ, ಅದಕ್ಕಾಗಿಯೇ ನಾವು ಆರು ತಿಂಗಳ ಹಿಂದಿನಿಂದಲೂ ಸಭೆಗಳು, ಹಾಗೂ ಕಾರ್ಯಾಚರಣೆಗಳನ್ನು ಆರಂಭಿಸಿದ್ದೆವು. ಆರು ತಿಂಗಳ ಹಿಂದಿನಿಂದಲೂ ಗಡಿಯಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮನೋಜ್ ಕುಮಾರ್ ಮೀನಾ
ಚಿತ್ರದುರ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ದೂರು ದಾಖಲು

ನಾಮಪತ್ರ ಸಲ್ಲಿಕೆ ಶುರುವಾಗುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಅಕ್ರಮಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ನಾವು ಮತ್ತಷ್ಟು ಜಾಗರೂಕರಾಗಿರಬೇಕಿದೆ. ಇದಕ್ಕಾಗಿ ಮಾದಕ ದ್ರವ್ಯ, ಕಸ್ಟಮ್ಸ್, ನಾಗರಿಕ ವಿಮಾನಯಾನ, ವಾಣಿಜ್ಯ ತೆರಿಗೆ, ಐಟಿ ಮತ್ತು ಇತರ ಇಲಾಖೆಗಳ ವಿಶೇಷ ತಂಡಗಳೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಮತ್ತಷ್ಟು ಭದ್ರತೆಯನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ, ಅಧಿಕಾರಿಗಳು ಈ ವರೆಗೂ 2,51,86,306 ರೂ ಮೌಲ್ಯದ ಸೀರೆಗಳು, 65,43,178 ರೂ. 9,01,82,132 ಮೌಲ್ಯದ ಚಿನ್ನ, 26,19,340 ಮೌಲ್ಯದ ಬೆಳ್ಳಿ ಮತ್ತು 9,00,000 ಮೌಲ್ಯದ ವಜ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಮಾರ್ಚ್ 28, 2024 ರವರೆಗೆ 26,35,95,935 ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ, ಇದರಲ್ಲಿ ನಕಲಿ ಮತ್ತು ಲೆಕ್ಕಕ್ಕೆ ಸಿಗದ ಮದ್ಯವೂ ಇದೆ. ಫ್ಲೈಯಿಂಗ್ ಸ್ಕ್ವಾಡ್‌ಗಳು, ಪೊಲೀಸ್ ಮತ್ತು ಐಟಿ ಇಲಾಖೆಯು 20,14,99,187 ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈವರೆಗೆ 88,37,280 ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಮನೋಜ್ ಕುಮಾರ್ ಮೀನಾ
ಲೋಕಸಭೆ ಚುನಾವಣೆ: ಗಡಿ ಭಾಗಗಳಲ್ಲಿ ತಪಾಸಣೆ ಹೆಚ್ಚಿದ ತಪಾಸಣೆ

ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮುನ್ನವೇ 2023ರ ಆಗಸ್ಟ್ 1ರಿಂದ ಮಾರ್ಚ್ 14ರವರೆಗೆ 537.51 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಈವೇಳೆ 4,710 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೊದಲ ಹಂತದ ಚುನಾವಣೆ ಮುಗಿದ ಕೂಡಲೇ ಪೊಲೀಸರು, ಅರೆಸೇನಾ ಪಡೆಗಳು ಮತ್ತು ಇತರ ಭದ್ರತಾ ಸಿಬ್ಬಂದಿಯನ್ನು ಕರ್ನಾಟಕಕ್ಕೆ ರವಾನಿಸಲಾಗುವುದು ಎಂದು ಹಿರಿಯ ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿಗಳ ಸಂಖ್ಯೆಯನ್ನು ಬಹಿರಂಗಪಡಿಸಲಾಗುವುದಿಲ್ಲ, ಆದರೆ, ಸಿಬ್ಬಂದಿಗಳ ನಿಯೋಜನೆ ಸಂಖ್ಯೆ ಹೆಚ್ಚುತ್ತಲೇ ಇದೆ. ಸೂಕ್ಷ್ಮ, ಅತಿ ಸೂಕ್ಷ್ಮ ಕ್ಷೇತ್ರಗಳು, ಬೂತ್‌ಗಳು ಮತ್ತು ಜಿಲ್ಲೆಗಳನ್ನು ಗುರುತಿಸಿ, ಅಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಸಿಬ್ಬಂದಿಗಳ ನಿಯೋಜನೆಗೆ ಚುನಾವಣಾ ಆಯೋಗವನ್ನು ಸಂಪರ್ಕಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com