ಈಗಾಗಲೇ ಬಗೆಹರಿದ ವಿಚಾರಕ್ಕೆ ನನಗೂ ಐಟಿ ನೋಟಿಸ್, ಕೇವಲ ಕಾಂಗ್ರೆಸ್ ನಾಯಕರ ಟಾರ್ಗೆಟ್: ಡಿಕೆ ಶಿವಕುಮಾರ್

1,800 ಕೋಟಿ ರೂಪಾಯಿ ತೆರಿಗೆ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: 1,800 ಕೋಟಿ ರೂಪಾಯಿ ತೆರಿಗೆ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಈಗಾಗಲೇ ಬಗೆಹರಿದ ವಿಚಾರಕ್ಕೆ ನಿನ್ನೆ ರಾತ್ರಿ ನನಗೂ ಐಟಿ ನೋಟಿಸ್ ಬಂದಿದೆ. ಕೇವಲ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಡಿಸಿಎಂ ಡಿಕೆ ಶಿವಕುಮಾರ್
ಐಟಿ ಇಲಾಖೆ 1800 ಕೋಟಿ ರೂ. ನೋಟಿಸ್: ಚುನಾವಣೆ ವೇಳೆ ಆರ್ಥಿಕವಾಗಿ ವಿಪಕ್ಷಗಳ ಕತ್ತು ಹಿಸುಕುತ್ತಿದೆ ಬಿಜೆಪಿ; ಕಾಂಗ್ರೆಸ್ ಕಿಡಿ

ಬಿಜೆಪಿ ನಾಯಕರ ಮೇಲೂ ಸಿಬಿಐ ತನಿಖೆ ನಡೆಯುತ್ತಿದೆ. ಆದರೆ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ. ಕೇವಲ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ, ಕಾನೂನು ಇದೆ. ಬಿಜೆಪಿ ಸರ್ಕಾರ ಅಧಿಕಾರಿಗಳಿಗೆ ಇಂತಹ ಸೂಚನೆ ನೀಡುತ್ತಿದೆ. ಅಧಿಕಾರ ಬರುತ್ತೆ ಹೋಗುತ್ತೆ, ಯಾವುದು ಕೂಡ ಶಾಶ್ವತವಲ್ಲಾ, ಯಾಕೆ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದರು.

ಇಂಡಿಯಾ ಮೈತ್ರಿ ಟಾರ್ಗೆಟ್ ಮಾಡಲಾಗಿದೆ. ಸೋಲಿನ ಭಯದಿಂದ ಎನ್ ಡಿ ಎ ಮೈತ್ರಿಕೂಟ ಹತಾಶೆಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಸೋಲಿಸಲು ಹೊರಟಿದೆ. ಈ ದೌರ್ಬಲ್ಯವನ್ನು ಬಿಜೆಪಿ ಅರ್ಥ ಮಾಡಿಕೊಂಡಿದೆ. ಚುನಾವಣೆಯಲ್ಲಿ ಸೋಲುವುದು ಅವರಿಗೆ ಗೊತ್ತು. ಹೀಗಾಗಿ ಭಯ ಹುಟ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com