ಬೆಂಗಳೂರು: ಅಪರಾಧ ಪ್ರಕರಣ ತಡೆಯಲು ಇ-ವಾಹನಗಳಿಗೂ ನಂಬರ್ ಪ್ಲೇಟ್‌ ಕಡ್ಡಾಯಗೊಳಿಸಿ; ಪೊಲೀಸರ ಆಗ್ರಹ

ರಸ್ತೆ ಸುರಕ್ಷತೆ ಹೆಚ್ಚಿಸಲು, ಸರಗಳ್ಳತನ, ದರೋಡೆಯಂತಹ ಅಪರಾಧಗಳ ತಡೆಯಲು ಎಲ್ಲಾ ಎಲೆಕ್ಟ್ರಕ್ ವಾಹನಗಳಿಗೆ ಹೈ-ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಕಡ್ಡಾಯಗೊಳಿಸಿದೆ. ಆದರೂ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ನೀಡಲಾಗಿರುವ ವಿನಾಯಿತಿ ಆತಂಕಕ್ಕೆ ಕಾರಣವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಸ್ತೆ ಸುರಕ್ಷತೆ ಹೆಚ್ಚಿಸಲು, ಸರಗಳ್ಳತನ, ದರೋಡೆಯಂತಹ ಅಪರಾಧಗಳ ತಡೆಯಲು ಎಲ್ಲಾ ಎಲೆಕ್ಟ್ರಕ್ ವಾಹನಗಳಿಗೆ ಹೈ-ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಕಡ್ಡಾಯಗೊಳಿಸಿದೆ. ಆದರೂ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ನೀಡಲಾಗಿರುವ ವಿನಾಯಿತಿ ಆತಂಕಕ್ಕೆ ಕಾರಣವಾಗಿದೆ.

ಇ-ಬೈಕ್ ಗಳ ವಾಹನ ಸವಾರರು ಸಂಚಾರ ನಿಯಮಗಳ ಉಲ್ಲಂಘನೆ ಮಾಡುತ್ತಿರುವುದು ಹೆಚ್ಚಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಬೆಂಗಳೂರು ನಗರ ಸಂಚಾರ ಪೊಲೀಸರು ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳೂ ಕೂಡ ನಂಬರ್ ಪ್ಲೇಟ್‌ಗಳ ನಿಯಮ ಅನುಸರಿಸುವಂತೆ ಮಾಡಬೇಕು ಎಂದು ಪೂರ್ವ ವಲಯದ ಡಿಸಿಪಿ (ಸಂಚಾರ) ಕುಲದೀಪ್ ಕುಮಾರ್ ಜೈನ್ ಅವರು ಹೇಳಿದ್ದಾರೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳ ಪ್ರಕಾರ (CMVR), 250 ವ್ಯಾಟ್‌ಗಳಿಗಿಂತ ಕಡಿಮೆ ವಿದ್ಯುತ್ ಉತ್ಪಾದನೆಯನ್ನು ಹೊಂದಿರುವ ಮತ್ತು 30 kmph ಗಿಂತ ಹೆಚ್ಚಿನ ವೇಗವನ್ನು ಹೊಂದಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಎಲೆಕ್ಟ್ರಿಕ್ ವಾಹನಗಳ ವರ್ಗೀಕರಣದ ಅಡಿಯಲ್ಲಿ ಬರುತ್ತವೆ. ಈ ವಾಹನಗಳ ಚಲಾಯಿಸುವವರಿಗೆ ಪರವಾನಗಿ, ಹೆಲ್ಮೆಟ್ ಅಥವಾ ನಂಬರ್ ಪ್ಲೇಟ್‌ಗಳ ಅಗತ್ಯವಿರುವುದಿಲ್ಲ. ಈ ವಾಹನಗಳನ್ನು RTO ಅಡಿಯಲ್ಲಿ ನೋಂದಾಯಿಸಲಾಗುವುದಿಲ್ಲ. ಹೀಗಾಗಿ ಇಂತಹ ವಾಹನಗಳನ್ನು ಹೆಚ್ಚಾಗಿ ಡೆಲಿವರಿ ಏಜೆಂಟ್‌ಗಳು ಬಳಕೆ ಮಾಡುತ್ತಾರೆ. ಈ ವಾಹನಗಳ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಹೆಚ್ಚಾಗುತ್ತಿದೆ. ನಂಬರ್ ಪ್ಲೇಟ್ ಇರದ ಕಾರಣ ಸವಾರರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ನಿಯಮಗಳಿದ್ದರೂ ಇಲ್ಲದಿಲ್ಲದರೂ ವಾಹನ ಸವಾರರು ತಮ್ಮ ಸುರಕ್ಷತೆಗಾದರೂ ಸಂಚಾರ ನಿಯಮಗಳ ಪಾಲನೆಗೆ ಬದ್ಧರಾಗಿರಬೇಕಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಂಗ್ರಹ ಚಿತ್ರ
ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ!

ಸಂಚಾರ ಸಲಹೆಗಾರ ಮತ್ತು ತಜ್ಞ ಪ್ರೊ.ಎಂ.ಎನ್.ಶ್ರೀಹರಿ ಅವರು ಮಾತನಾಡಿ, ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಪ್ರಯತ್ನವಾಗಿದ್ದು, ಮಾಲಿನ್ಯವನ್ನು ಕಡಿಮೆ ಮಾಡುತ್ತದೆ ಹಾಗೂ ಪರಿಸರ ಸ್ನೇಹಿ ವಾಹನಗಳೂ ಕೂಡ ಆಗಿದೆ. ಆದರೂ, ನಂಬರ್ ಪ್ಲೇಟ್ ಇಲ್ಲದೆ ಸಂಚಾರ ನಿಯಮ ಉಲ್ಲಂಘಿಸುವುದು ಸರಿಯಲ್ಲ. ಹೆಚ್ಚಿನ ಶಕ್ತಿ ಸಾಮರ್ಥ್ಯ ಹೊಂದಿರುವ ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ನಂಬರ್ ಪ್ಲೇಟ್ ಕಡ್ಡಾಯಗೊಳಿಸಬೇಕು ಎಂದು ಹೇಳಿದ್ದಾರೆ.

ಕಾರ್ ಶೋರೂಮ್ ಉದ್ಯೋಗಿ ಅಭಿನವ್ ಎಂಬುವವರು ಮಾತನಾಡಿ, ಈ ಬೈಕ್‌ಗಳನ್ನು ಡೆಲಿವರಿಗಾಗಿ ಬಳಸಲಾಗುತ್ತದೆ. ಕೆಲವರು ಪಿಕ್-ಅಪ್ ಮತ್ತು ಡ್ರಾಪ್ ಸೇವೆಗಳನ್ನು ನೀಡುತ್ತಿದ್ದಾರೆ. ಈ ಬೈಕ್‌ಗಳಿಗೆ ನಂಬರ್ ಪ್ಲೇಟ್‌ ಇರುವುದಿಲ್ಲ. ಸಿಸಿಟಿವಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆಗಳು ಕಂಡು ಬಂದರೂ ನಂಬರ್ ಪ್ಲೇಟ್ ಇಲ್ಲದ ಕಾರಣ ಸವಾರರನ್ನು ಪತ್ತೆ ಮಾಡುವುದು ಪೊಲೀಸರಿಗೆ ಕಷ್ಟವಾಗುತ್ತಿದೆ. ಹೀಗಾಗಿ ಇತರೆ ವಾಹನಗಳಂತೆ ಎಲೆಕ್ಟ್ರಿಕ್ ವಾಹನಗಳಿಗೂ ನಂಬರ್ ಪ್ಲೇಟ್ ನ್ನು ಕಡ್ಡಾಯ ಮಾಡಬೇಕಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com