ಬೆಂಗಳೂರು: ಐಟಿ ಇಲಾಖೆ ಅಧಿಕಾರಿಗಳು ಇಂದು ಕ್ರಷರ್ ಮಾಲೀಕನ ಮನೆ ಮೇಲೆ ದಾಳಿ ನಡೆಸಿದ್ದು, 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಕೃಷ್ಣರಾಜಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್ ಎಂಬುವವರ ಅಳಿಯ ಲೋಕೇಶ್ ಮನೆ ಮೇಲೆ ದಾಳಿ ದೊಡ್ಡ ಮಟ್ಟದಲ್ಲಿ ನಗದನ್ನು ಐಟಿ ಇಲಾಖೆ ವಶಕ್ಕೆ ಪಡೆದಿದ್ದಾರೆ.
ಇನ್ನು ಕೆಲದಿನಗಳ ಹಿಂದೆ ಗಡಿಭಾಗದ ಚೆಕ್ಪೋಸ್ಟ್ನಲ್ಲಿ ಲೋಕೇಶ್ 10 ಲಕ್ಷ ಹಣದ ಜೊತೆ ಸಿಕ್ಕಿಬಿದ್ದಿದ್ದರು. ಈ ಹಿನ್ನಲೆ ಅನುಮಾನದಿಂದ ಐಟಿ ಇಲಾಖೆ ಡಿಡಿ ವಿಷ್ಣುಪ್ರಸಾದ್ ನೇತೃತ್ವದಲ್ಲಿ 6 ಅಧಿಕಾರಿಗಳು ಲೋಕೇಶ್ ನಿವಾಸದ ಮೇಲೆ ದಾಳಿ ನಡೆಸಿತ್ತು.
Advertisement