ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ ಪ್ರಕರಣ: ನಟ ದರ್ಶನ್ ಸೇರಿ 8 ಮಂದಿಗೆ ಕ್ಲೀನ್ ಚೀಟ್

ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಎಲ್ಲಾ 8 ಮಂದಿಗೂ ಬಿಗ್ ರಿಲೀಫ್ ಸಿಕ್ಕಿದೆ. ರಾಜಾಜಿನಗರದ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಟ ದರ್ಶನ್ ಮತ್ತಿತರರು
ನಟ ದರ್ಶನ್ ಮತ್ತಿತರರು
Updated on: 

ಬೆಂಗಳೂರು: ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಎಲ್ಲಾ 8 ಮಂದಿಗೂ ಬಿಗ್ ರಿಲೀಫ್ ಸಿಕ್ಕಿದೆ. ರಾಜಾಜಿನಗರದ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ತಡ ರಾತ್ರಿ ಪಾರ್ಟಿ ಮಾಡಿಲ್ಲ. ಆರೋಪಿಗಳು ಊಟದ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನಟ ದರ್ಶನ್ ಮತ್ತಿತರರು
ಅವಧಿ ಮೀರಿ 'ಕಾಟೇರ' ಚಿತ್ರತಂಡ ಪಾರ್ಟಿ: ಜೆಟ್ ಲ್ಯಾಗ್ ಪಬ್ ಪರವಾನಗಿ 25 ದಿನ ರದ್ದು

ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗೆ ಅನ್ವಯವಾಗುವ ನಿಯಮ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್ ಮುಚ್ಚಬೇಕು. ಒಂದು ಗಂಟೆ ಆಗುತ್ತಿದ್ದಂತೆಯೇ ಪಾರ್ಟಿ ಪೂರ್ಣಗೊಳಿಸಬೇಕಿತ್ತು. ಆದರೆ. ಅವಧಿ ಮೀರಿ ಪಾರ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಟ್‌ಲ್ಯಾಗ್‌ ಪಬ್ ಮಾಲೀಕ, ಮ್ಯಾನೇಜರ್ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಸೇರಿ 8 ಮಂದಿಗೆ ನೋಟಿಸ್‌ ಜಾರಿಯಾಗಿತ್ತು. 8 ಜನರು ವಿಚಾರಣೆಗೆ ಹಾಜರಾಗಿ ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರಿಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com