ಪ್ರಜ್ವಲ್ ವಿರುದ್ಧ ಸ್ವಯಂ ಪ್ರೇರಿತವಾಗಿ ಪೋಕ್ಸೋ ಪ್ರಕರಣ ದಾಖಲಿಸಿ’: ಸರ್ಕಾರಕ್ಕೆ ವಕೀಲ ಎಂ.ಸಿ.ನರಹರಿ ಆಗ್ರಹ

ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಸುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸ್ವಯಂ ಪ್ರೇರಿತವಾಗಿ ಪೋಕ್ಸೊ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ವಕೀಲ ಡಾ.ಎಂ.ಸಿ.ನರಹರಿ ಅವರು ಬುಧವಾರ ಆಗ್ರಹಿಸಿದ್ದಾರೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಚಿತ್ರದುರ್ಗ: ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಸುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸ್ವಯಂ ಪ್ರೇರಿತವಾಗಿ ಪೋಕ್ಸೊ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ವಕೀಲ ಡಾ.ಎಂ.ಸಿ.ನರಹರಿ ಅವರು ಬುಧವಾರ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತನಿಖೆ ವಿಳಂಬವಾದರೆ ತನಿಖೆ ಹಳಿತಪ್ಪಬಹುದು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರ ಕೂಡಲೇ ಸ್ವಯಂ ಪ್ರೇರಿತವಾಗಿ ಪೋಕ್ಸೊ ಪ್ರಕರಣ ದಾಖಲಿಸಬೇಕು ಎದು ಒತ್ತಾಯಿಸಿದರು.

ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಡಿಕೆಶಿ ಕೈವಾಡ- ಕುಮಾರಸ್ವಾಮಿ ಹತಾಶೆ ಹೇಳಿಕೆ: ಕಾಂಗ್ರೆಸ್ ಆರೋಪ

ಪ್ರಜ್ವಲ್ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ತನಿಖೆ ವಿಳಂಬವಾದರೆ ತನಿಖೆ ಹಳಿತಪ್ಪುವ ಸಾಧ್ಯತೆಗಳಿವೆ. ಹೀಗಾಗಿ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಶೀಘ್ರ ಬಂಧಿಸಿ, ತನಿಖೆಗೊಳಪಡಿಸಬೇಕು. ಇದೇ ರೀತಿಯ ಅಪರಾಧವನ್ನು ಸಾಮಾನ್ಯ ವ್ಯಕ್ತಿ ಮಾಡಿದ್ದರೆ, ಎಸ್ಐಟಿ ಮುಕ್ತವಾಗಿ ತಿರುಗಾಡಲು ಅವಕಾಶ ನೀಡುತ್ತಿತ್ತೇ ಎಂದು ಪ್ರಶ್ನಿಸಿದರು.

ಇದೇ ವೇಳೆ ಪ್ರಜ್ವಲ್ ಅವರನ್ನು ದೇಶದ ಅತ್ಯಂತ ಕೆಟ್ಟ ಸಂಸದರಲ್ಲಿ ಒಬ್ಬರು ಎಂದು ಬಣ್ಣಿಸಿದ ಅವರು, ಇಲ್ಲಿಯವರೆಗೆ ಎಲ್ಲಾ ವಿಷಯಗಳ ಬಗ್ಗೆ ಗಲಾಟೆ ಮಾಡುತ್ತಿದ್ದ ಜೆಡಿಎಸ್ ಮಿತ್ರ ಪಕ್ಷ ಬಿಜೆಪಿಯು ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂಪೂರ್ಣವಾಗಿ ಮೌನ ತಾಳಿದೆ. ಬಿಜೆಪಿ ನಾಯಕರು ಈ ಬಗ್ಗೆ ಕಳವಳ ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com