ಕಲಬುರಗಿ: ಅಂಬೇಡ್ಕರ್ ಪುತ್ಥಳಿಗೆ ಅವಮಾನ; ಪ್ರತಿಭಟನೆ

ಇಲ್ಲಿನ ಹೊರ ವಲಯ ಕಲಬುರಗಿ-ಜೇವರ್ಗಿ ರಸ್ತೆಯಲ್ಲಿ ಬರುವ ಕೋಟನೂರು (ಡಿ) ಪ್ರದೇಶದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿ ಪ್ರಕರಣದಲ್ಲಿನ ಆರೋಪಿಯೊಬ್ಬ ಮನೆಗೆ ನುಗ್ಗಿದ ಗುಂಪೊಂದು ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ಹಿಗ್ಗಾಮುಗ್ಗಾ ಥಳಿಸಿದೆ...
ಉಮೇಶ ಜಾಧವ್ ಅವರು ಕೊಟ್ನೂರು ಮಠದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.
ಉಮೇಶ ಜಾಧವ್ ಅವರು ಕೊಟ್ನೂರು ಮಠದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

ಕಲಬುರಗಿ: ಇಲ್ಲಿನ ಹೊರ ವಲಯ ಕಲಬುರಗಿ-ಜೇವರ್ಗಿ ರಸ್ತೆಯಲ್ಲಿ ಬರುವ ಕೋಟನೂರು (ಡಿ) ಪ್ರದೇಶದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿ ಪ್ರಕರಣದಲ್ಲಿನ ಆರೋಪಿಯೊಬ್ಬ ಮನೆಗೆ ನುಗ್ಗಿದ ಗುಂಪೊಂದು ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ಹಿಗ್ಗಾಮುಗ್ಗಾ ಥಳಿಸಿದೆ ಎಂದು ಆರೋಪಿಯ ಕುಟುಂಬ ಸದಸ್ಯರು, ಬೆಂಬಲಿಗರು ಹಾಗೂ ವೀರಶೈವ-ಲಿಂಗಾಯಿತ ಸಮಾಜ ಮುಖಂಡರು ಸೇರಿ ಬುಧವಾರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಕಳೆದ ಜ.23ರಂದು ಕೋಟನೂರು ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣದ ಆರೋಪಿ ಸಂಗಮೇಶ ಅವರಿಗೆ ಮಂಗಳವಾರ ನ್ಯಾಯಾಲಯ ಜಾಮೀನು ನೀಡಿತ್ತು. ಇದರಿಂದಾಗಿ ಸಂಗಮೇಶ ಜಾಮೀನು ಮೇಲೆ ಬಿಡುಗಡೆ ಕೂಡ ಆಗಿದ್ದರು. ಇದನ್ನು ತಿಳಿದ ಕೋಟನೂರ್ (ಡಿ) ಊರಿನ ಮತ್ತೊಂದು ಗುಂಪು ಮಂಗಳವಾರ ರಾತ್ರಿ ಸಂಗಮೇಶ ಅವರ ಮನೆಗೆ ನುಗ್ಗಿ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಿದ್ದಾರೆಂದು ಸಂಗಮೇಶನ ಸಹೋದರ ಶಿವಕುಮಾರ್ ಹೇಳಿದ್ದಾರೆ.

ಸಂಗಮೇಶನ ಅಣ್ಣನ ಪತ್ನಿ ರಾಜೇಶ್ವರಿ, ತಮ್ಮ ಅನಿಲ್ ಕುಮಾರ್, ಚಿಕ್ಕಪ್ಪ ಮಹಾದೇವಪ್ಪ, ತಾಯಿಯಾದ ತಂಗೆಮ್ಮ ಇವರೆಲ್ಲೂ ಹಲ್ಲೆ ಘಟನೆಯಲ್ಲಿ ತೀವ್ರ ಗಾಯಗಳನ್ನು ಅನುಭವಿಸಿದ್ದಾರೆ. ಇವರನ್ನೆಲ್ಲ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಮನೆಯ ಸಮೀಪ ನಿಲ್ಲಿಸಿದ್ದ 1 ಕಾರು, ನಾಲ್ಕಾರು ಬೈಕ್ ಗಳನ್ನು ಹಲ್ಲೆಕೋರರು ಜಖಂ ಮಾಡಿದ್ದಾರೆ. ಇಷ್ಟೆಲ್ಲಾ ಆದರೂ ಕೂಡ ಪೊಲೀಸರು ಈ ವರೆಗೂ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಶಿವಕುಮಾರ್ ಆರೋಪಿಸಿದ್ದಾರೆ.

ಉಮೇಶ ಜಾಧವ್ ಅವರು ಕೊಟ್ನೂರು ಮಠದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.
ಕಲಬುರಗಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಅಂಬೇಡ್ಕರ್ ಪುತ್ಥಳ ಅಪಮಾನ ಪ್ರಕರಣದಲ್ಲಿ ನನ್ನ ಪತಿ ಬಂಧಿತರಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಅವರು ತಪ್ಪು ಮಾಡಿರುವುದು ತಾಬೀತಾದರೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ. ಅದಕ್ಕೆ ನಮ್ಮ ತಕರಾರಿಲ್ಲ. ಆದರೆ, ಜಾಮೀನು ಮೇಲೆ ಬಿಡುಗಡೆಯಾಗಿದ್ದಕ್ಕೆ ಕುಟುಂಬ ಸದಸ್ಯರ ಮನೆಗೆ ನುಗ್ಗಿ ಅವರೆನ್ನೆಲ್ಲ ಥಳಿಸಿ ಹಲ್ಲೆ ಮಾಡಿರುವುದು ಯಾವ ನ್ಯಾಯ? ಮನೆಗೆ ನುಗ್ಗಿ ಹೊಡೆದಿದ್ದಾರೆ. ರಕ್ಷಣೆಗೆ ಬನ್ನಿರೆಂದು ಗೋಗರೆದರೂ ಪೊಲೀಸರು ರಕ್ಷಣೆಗೆ ಬರಲೇ ಇಲ್ಲವೆಂದು ಸಂಗಮೇಶರ ಪತ್ನಿ ಪ್ರಿಯಾಂಕ್ ಹೇಳಿದ್ದಾರೆ.

ಈ ನಡುವೆ ಕಲಬುರಗಿಯಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಉಮೇಶ್ ಜಾಧವ್ ಭಾಗವಹಿಸಿದ್ದರು. ಕೊಟ್ನೂರು ಮಠದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಗಂಟೆಗೂ ಹೆಚ್ಚು ಕಾಲ ಧರಣಿ ಕುಳಿತರು. ಸುಡು ಬಿಸಿಲಿನಲ್ಲಿ ತಳ್ಳಾಟ ನೂಕಾಟ ನಡೆದಿದ್ದು, ಈ ವೇಲೆ ಜಾಧವ್ ಅವಕು ಕೆಳೆಗೆ ಬಿದ್ದು ಪ್ರಜ್ಞಾಹೀರಾಗಿದ್ದರು. ಬಳಿಕ ಸ್ಥಳಕ್ಕೆ ಆಂಬ್ಯುಲೆನ್ಸ್ ಕರೆಸಿ ಕಲಬುರಗಿಯ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಪ್ರತಿಭಟನೆಯಲ್ಲಿ ಕೆಕೆಆರ್‌ಡಿಬಿ ಮಾಜಿ ಅಧ್ಯಕ್ಷ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರವಡ್ಡೇವಾಡಗಿ ಪಾಲ್ಗೊಂಡಿದ್ದರು.

ಘಟನಾ ಸ್ಥಳಕ್ಕೆ ದೌಡಾಯಿಸಿದ ಕಲಬುರಗಿ ಪೊಲೀಸ್ ಆಯುಕ್ತ ಚೇತನ್ ಆರ್ ಅವರು, ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಈ ವೇಳೆ ಪ್ರತಿಭಟನಾನಿರತರು ಸಂಗಮೇಶ್ ಕುಟುಂಬಸ್ಥರು ಸಹಾಯಕ್ಕಾಗಿ ಸಂಪರ್ಕಿಸಿದಾಗ ಪೊಲೀಸರು ಏಕೆ ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಪ್ರಶ್ನಿಸಿದರು. ಅಲ್ಲದೆ, ದೂರು ಸ್ವೀಕರಿಸಲು ಕಲಬುರಗಿ ಜಿಲ್ಲಾಧಿಕಾರಿ ಆಗಮಿಸಬೇಕು ಎಂದು ಪಟ್ಟು ಹಿಡಿದರು. ಆದರೆ ಜಿಲ್ಲಾಧಿಕಾರಿಗಳು ಅಫಜಲಪುರದಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರು.

ಬಳಿಕ ಕಾಂಗ್ರೆಸ್ ಪಕ್ಷದ ಗುಲ್ಬರ್ಗ-ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಶರಣಕುಮಾರ ಮೋದಿ ಅವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನಪಡಿಸಿದರು. ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ದೂರು ಸ್ವೀಕರಿಸಲು ಬರುವುದಾಗಿ ಹೇಳಿದರು.

ಈ ನಡುವೆ ಕಲಬುರಗಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ಅವರ ಆರೋಗ್ಯ ವಿಚಾರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com