ಭವಾನಿ ರೇವಣ್ಣಗೆ SIT ನೋಟಿಸ್; ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಒಬ್ಬನ ಬಂಧನ

ಎಸ್‌ಐಟಿ ಇಂದು ಸ್ಥಳೀಯ ಪೊಲೀಸರ ಮೂಲಕ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಭವಾನಿ ರೇವಣ್ಣ
ಭವಾನಿ ರೇವಣ್ಣ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ(ಎಸ್‌ಐಟಿ) ಶುಕ್ರವಾರ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಎಸ್‌ಐಟಿ ಇಂದು ಸ್ಥಳೀಯ ಪೊಲೀಸರ ಮೂಲಕ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಪಡೆಯಲು ಅವರ ತಾಯಿಗೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.

ಭವಾನಿ ರೇವಣ್ಣ
ಪ್ರಜ್ವಲ್ ರೇವಣ್ಣಗೆ ಸಂಕಷ್ಟ: ಅತ್ಯಾಚಾರ ಪ್ರಕರಣ ದಾಖಲು. ಸಂತ್ರಸ್ತೆ ನಾಪತ್ತೆ; ರೇವಣ್ಣ ವಿರುದ್ಧ FIR!

ಮತ್ತೊಂದು ಬೆಳವಣಿಗೆಯಲ್ಲಿ ಮೈಸೂರು ಜಿಲ್ಲೆಯ ಪೊಲೀಸರು ಎಚ್‌ಡಿ ರೇವಣ್ಣ ಅವರ ಸಂಬಂಧಿ, ಸತೀಶ್ ಬಾಬು ಅವರನ್ನು ಬಂಧಿಸಿದ್ದಾರೆ. ರಾಸಲೀಲೆ ಪ್ರಕರಣದ ಸಂತ್ರಸ್ಥೆ, ಹಾಗೂ ಅವರ ಮನೆ ಕೆಲಸದ ಮಹಿಳೆ ಅಪಹರಣ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬು ಅವರ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14 ದಿನಗಳವರಗೆ ನ್ಯಾಯಾಂಗ ಬಂಧನಕ್ಕೆ ಅದೇಶಿಸಿದೆ.

ಸಂತ್ರಸ್ಥೆ ಅಪಹರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಮತ್ತು ಸತೀಶ್ ಬಾಬು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮನೆಯ ಕೆಲಸದ ಮಹಿಳೆಯನ್ನು ಅಪಹರಿಸಲಾಗಿದೆ ಎಂದು ಆಕೆಯ ಪುತ್ರ ರಾಜು ಮೇ.2ರಂದು ನೀಡಿದ ದೂರಿನ ಹಿನ್ನಲೆಯಲ್ಲಿ ಎರಡನೇ ಆರೋಪಿ ಸತೀಶ್ ಬಾಬು ಅವರನ್ನು ಕೆ.ಆರ್.ನಗರ ಪೊಲೀಸರು ಬಂದಿಸಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಲಾಗಿದ್ದು, ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com