ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಶಾಸಕ ರೇವಣ್ಣಗೆ 2ನೇ ಬಾರಿ ನೋಟಿಸ್‌ ಕೊಟ್ಟಿದ್ದೇವೆ: ಗೃಹ ಸಚಿವ ಪರಮೇಶ್ವರ್

ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಎರಡನೇ ಬಾರಿ ನೋಟಿಸ್ ನೀಡಲಾಗಿದೆ ಎಂದು ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದ್ದಾರೆ.
ರಾಜ್ಯ ಗೃಹ ಸಚಿವ ಪರಮೇಶ್ವರ್
ರಾಜ್ಯ ಗೃಹ ಸಚಿವ ಪರಮೇಶ್ವರ್PTI

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಎರಡನೇ ಬಾರಿ ನೋಟಿಸ್ ನೀಡಲಾಗಿದೆ ಎಂದು ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದ್ದಾರೆ.

ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಹಿರಿಯ ಪುತ್ರರಾಗಿರುವ ಹೆಚ್ ಡಿ ರೇವಣ್ಣ ಅವರ ಪುತ್ರ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೂಡ ಅತ್ಯಾಚಾರ ಮತ್ತು ಕಿರುಕುಳ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಈ ಹಿಂದೆ ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ನೀಡಲಾಗಿದ್ದು, ಪ್ರಜ್ವಲ್ ರೇವಣ್ಣ ಪರ ವಕೀಲರು ಏಳು ದಿನಗಳ ಕಾಲಾವಕಾಶ ಕೋರಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡವು ತನಿಖೆ ತೀವ್ರಗೊಳಿಸಿರುವುದರಿಂದ ರೇವಣ್ಣಗೆ ಸಮಯ ನೀಡಲು ಸಾಧ್ಯವಿಲ್ಲ ಎಂದರು.

ರಾಜ್ಯ ಗೃಹ ಸಚಿವ ಪರಮೇಶ್ವರ್
ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಎಚ್ ಡಿ ರೇವಣ್ಣ ಅವರಿಗೂ ನೋಟಿಸ್ ನೀಡಲಾಗಿದ್ದು, 24 ಗಂಟೆಗಳ ಕಾಲಾವಕಾಶ ಕೋರಿದ್ದಾರೆ ಎಂದು ತಿಳಿಸಿದರು. ಕಾಲಾವಕಾಶ ನೀಡಲು ಸಾಧ್ಯವಾಗದ ಕಾರಣ, ಕ್ರಮಬದ್ಧವಾಗಿ ಎರಡನೇ ಬಾರಿಗೆ ರೇವಣ್ಣಗೆ ನೋಟಿಸ್‌ ನೀಡಲಾಗಿದೆ. ಏಕೆಂದರೆ ಕಾನೂನು ಪ್ರಕಾರ ಸೂಕ್ತ ಅವಕಾಶ ನೀಡಬೇಕು. ನೋಟಿಸ್‌ಗೆ ಸ್ಪಂದಿಸದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ವಿಡಿಯೋದಲ್ಲಿರುವವರನ್ನು ಎಸ್ ಐಟಿ ಗುರುತಿಸಿ ಅವರಿಗೆ ಧೈರ್ಯ ತುಂಬುತ್ತಿದೆ. ಇನ್ನೂ ಹೆಚ್ಚಿನ ಮಹಿಳೆಯರು ಬಂದು ದೂರು ದಾಖಲಿಸುತ್ತಾರೆ ಎಂದು ಕಾದು ನೋಡುತ್ತಿದ್ದೇವೆ ಎಂದು ನಾವು ನಿರೀಕ್ಷಿಸುತ್ತೇವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com