ಲೋಕಸಭೆ ಚುನಾವಣೆಯಲ್ಲಿ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸಿ: ನೇಹಾ ತಂದೆ ನಿರಂಜನ ಹಿರೇಮಠ ಮನವಿ

ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಪೋಷಕರು ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸಕ್ಕೆ ನೇಹಾ ಪೋಷಕರ ಭೇಟಿ
ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸಕ್ಕೆ ನೇಹಾ ಪೋಷಕರ ಭೇಟಿ
Updated on

ಬೆಳಗಾವಿ: ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಪೋಷಕರು ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಭೇಟಿ ನೀಡಿ ಕಷ್ಟದ ಸಮಯದಲ್ಲಿ ಕುಟುಂಬಕ್ಕೆ ಬೇಕಾದ ಎಲ್ಲಾ ರೀತಿಯ ಬೆಂಬಲ ನೀಡಿದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೇಹಾ ಅವರ ತಂದೆ ನಿರಂಜನ್ ಹಿರೇಮಠ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರಿ ಹತ್ಯೆಯಾದ ನಂತರ ಬೆಂಬಲ ವ್ಯಕ್ತಪಡಿಸಲು ಮನೆಗೆ ಬಂದಿದ್ದು, ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಹಂತಕರಿಗೂ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಸಿಎಂ ಹೇಳಿದರು.

ಕಷ್ಟಕಾಲದಲ್ಲಿ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲುವಲ್ಲಿ ಹೆಬ್ಬಾಳ್ಕರ್ ನಿರ್ವಹಿಸಿದ ಪಾತ್ರವನ್ನು ಶ್ಲಾಘಿಸಿದ ನಿರಂಜನ್, ನೇಹಾ ಸಾವಿನ ವಿಷಯವನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಬೆಳಗಾವಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸಕ್ಕೆ ನೇಹಾ ಪೋಷಕರ ಭೇಟಿ
ನೇಹಾ ಹತ್ಯೆ ಪ್ರಕರಣ: ಕರ್ನಾಟಕದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಇಡೀ ರಾಷ್ಟ್ರದಲ್ಲಿ ಆತಂಕ- ಪ್ರಧಾನಿ ಮೋದಿ

ಮುಂದಿನ ದಿನಗಳಲ್ಲಿ ಸಂಸತ್ತಿನಲ್ಲಿ ನೇಹಾ ಹತ್ಯೆಯ ವಿಷಯವನ್ನು ಪ್ರಸ್ತಾಪಿಸಲು ಜನರು ಮೃಣಾಲ್ ಅವರನ್ನು ಬೆಂಬಲಿಸಬೇಕೆಂದು ನಾನು ಬಯಸುತ್ತೇನೆ ಎಂದು ನಿರಂಜನ್ ಹೇಳಿದರು. ಕುಟುಂಬಕ್ಕೆ ಬೆಂಬಲ ನೀಡಿದ ಎಬಿವಿಪಿ ಸೇರಿದಂತೆ ವಿದ್ಯಾರ್ಥಿ ಸಂಘಗಳು ಹಾಗೂ ರಾಜಕೀಯ ಪಕ್ಷಗಳ ಬೇಧವಿಲ್ಲದೆ ಎಲ್ಲ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕಾರಣಿಗಳು ತಮ್ಮ ಕುಟುಂಬಕ್ಕೆ ನ್ಯಾಯ ಒದಗಿಸುವ ಏಕೈಕ ಉದ್ದೇಶದಿಂದ ನೇಹಾ ಹತ್ಯೆಯ ಘಟನೆಯ ಬಗ್ಗೆ ಮಾತನಾಡಿದ್ದಾರೆ ಎಂದು ನಿರಂಜನ್ ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com