
ಉತ್ತರ ಕನ್ನಡ: ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ತುಮಕೂರು ಮೂಲದ 26 ವರ್ಷದ ಲೋಕೇಶ್ ಮತ್ತು ಚಿಕ್ಕಬಳ್ಳಾಪುರದ 38 ವರ್ಷದ ರುದ್ರೇಶ್ ಎಂದು ಗುರುತಿಸಲಾಗಿದೆ. ಇನ್ನುಳಿದಂತೆ 49 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಬಸ್ ನಲ್ಲಿ 53 ಮಂದಿ ತಂಡ ಗೌರಿ ಬಿದನೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕನ ಅತೀ ವೇಗದ ಕಾರಣ ಬಸ್ ಸುಳೆಮುರ್ಕಿ ತಿರುವಿನಲ್ಲಿ ಪಲ್ಟಿಯಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement