ವಿಜಯಪುರ ಮರ್ಯಾದಾ ಹತ್ಯೆ ಪ್ರಕರಣ: ಗರ್ಭಿಣಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಇಬ್ಬರಿಗೆ ಗಲ್ಲು ಶಿಕ್ಷೆ

9 ತಿಂಗಳ ಗರ್ಭಿಣಿಯನ್ನು ಕೊಲೆ ಮಾಡಿದ್ದ ಮರ್ಯಾದಾ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಇತರ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯಪುರ: 9 ತಿಂಗಳ ಗರ್ಭಿಣಿಯನ್ನು ಕೊಲೆ ಮಾಡಿದ್ದ ಮರ್ಯಾದಾ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಇತರ ಐವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ವಿಜಯಪುರ ಜಿಲ್ಲಾ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

2017ರಲ್ಲಿ ಗರ್ಭಿಣಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಇಬ್ಬರಿಗೆ ಗಲ್ಲು ಶಿಕ್ಷೆ ಮತ್ತು ಇತರೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 4.19 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಮುದ್ದೇಬಿಹಾಳ ತಾಲೂಕಿನ ಗುಂಡಕನಾಳ ಗ್ರಾಮದ ಇಬ್ರಾಹಿಂಸಾಬ ಮಹಮ್ಮದಸಾಬ್ ಅತ್ತಾರ ಹಾಗೂ ಅಕ್ಬರ್ ಮಹಮ್ಮದಸಾಬ್ ಅತ್ತಾರಗೆ ಗಲ್ಲು ವಿಧಿಸಲಾಗಿದ್ದು, ಹತ್ಯೆಗೀಡಾದ ಮಹಿಳೆಯ ತಾಯಿ ರಮಜಾನಬಿ ಅತ್ತಾರ, ಸಂಬಂಧಿಗಳಾದ ದಾವಲಬಿ ಬಂದೇನವಾಜ್ ಜಮಾದಾರ, ಅಜಮಾ ಜಿಲಾನಿ ದಖನಿ, ಜಿಲಾನಿ ಅಬ್ದುಲ್‌ಖಾದರ್ ದಖನಿ, ದಾವಲಬಿ ಸುಭಾನ್ ಧನ್ನೂರಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಸಾಂದರ್ಭಿಕ ಚಿತ್ರ
ಕೋಲಾರದಲ್ಲಿ ಮರ್ಯಾದಾ ಹತ್ಯೆ: ಹೆತ್ತ ಮಗಳನ್ನು ಹತ್ಯೆ ಮಾಡಿ ಸುಟ್ಟು ಹಾಕಿದ ಅಪ್ಪ!

ಗುಂಡಕನಾಳ ಗ್ರಾಮದ ಬಾನು ಬೇಗಂ ಅತ್ತಾರ ಹಾಗೂ ಸಾಯಬಣ್ಣ ಕೊಣ್ಣೂರ ಎಂಬುವರು 2017ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇದು ಬಾನುಬೇಗಂ ಮನೆಯವರ ಕೆಂಗಣ್ಣಿಗೆ ಗುರಿಯಾಗಿತ್ತು. ಮದುವೆಯಾದ ಬಳಿಕ ಬೇರೆ ನಗರದಲ್ಲಿ ಬಾನು ಬೇಗಂ ಹಾಗೂ ಸಾಯಬಣ್ಣ ವಾಸವಿದ್ದರು. ಈ ವೇಳೆ ಬಾನು ಬೇಗಂ ಗರ್ಭಿಣಿಯಾದ ಕಾರಣ ಹೆರಿಗೆಗಾಗಿ ಗಂಡನ ಮನೆಗೆ ಬಂದಿದ್ದಳು. ಇದನ್ನೇ ಕಾಯುತ್ತಿದ್ದ ಆಕೆಯ ಪೋಷಕರು ಬಾನುಬೇಗಂ ಹಾಗೂ ಸಾಹೇಬಣ್ಣರನ್ನ ಕೊಲೆ ಮಾಡಲು ಮುಂದಾಗಿದ್ದರು.

ಪತಿ ಮತ್ತು ಪತ್ನಿ ಮೇಲೆ ಹಲ್ಲೆ ಮಾಡುವ ವೇಳೆ ಹಲ್ಲೆಗೊಳಗಾಗಿ ಬಾನು ಬೇಗ ಮೂರ್ಚೆ ಹೋಗಿದ್ದಳು. ಮೂರ್ಚೆ ಹೋದ ಗರ್ಭಿಣಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿತ್ತು. ಘಟನೆ ವೇಳೆ ಹಲ್ಲೆಕೋರರಿಂದ ಸಾಯಬಣ್ಣನನ್ನು ರಕ್ಷಣೆ ಮಾಡಲಾಗಿತ್ತು. ಬಾನುಬೇಗಂ ತಂದೆ-ತಾಯಿ ಹಾಗೂ ಅವರ ಸಂಬಂಧಿಕರು ಈ ಕೃತ್ಯ ಎಸಗಿದ್ದರು. ಈ ಪ್ರಕರಣ ಕುರಿತು ತನಿಖೆ ನಡೆಸಿ ತಾಳಿಕೋಟೆ ಪೊಲೀಸರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com