ಬಾಂಬ್ ಬೆದರಿಕೆ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ(ಎಂಐಎ) ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಬಗ್ಗೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣPTI

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ(ಎಂಐಎ) ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಬಗ್ಗೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಳೆದ ಏಪ್ರಿಲ್ 29ರಂದು ಬಂದ ಬೆದರಿಕೆಯ ನಂತರ, ಸಿಐಎಸ್ಎಫ್ ಮತ್ತು ಪೊಲೀಸರು ವಿಮಾನ ನಿಲ್ದಾಣದಾದ್ಯಂತ ಅನೇಕ ಹಂತದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

'Terrorisers 111' ಎಂಬ ಗುಂಪಿನಿಂದ ಇಮೇಲ್‌ ಬಂದಿದೆ ಎಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಮೂರು ಸ್ಥಳಗಳಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ. ಅಲ್ಲದೆ ದೊಡ್ಡ ಪ್ರಮಾಣದ ರಕ್ತಪಾತ ಸಂಭವಿಸುತ್ತದೆ. ಹೀಗಾಗಿ ಈ ಎಚ್ಚರಿಕೆ ಮತ್ತು ಬೆದರಿಕೆಯನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಎಂದು ಬರೆಯಲಾಗಿದೆ. ಇನ್ನು ಎಫ್‌ಐಆರ್‌ ದಾಖಲಾಗಿರುವುದನ್ನು ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಖಚಿತಪಡಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಗೋವಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಭದ್ರತೆ ಹೆಚ್ಚಳ

ಮೂಲಗಳ ಪ್ರಕಾರ, MIA ಜೊತೆಗೆ 30 ಇತರ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಮತ್ತು ಖಾಸಗಿ ವಿಮಾನ ನಿಲ್ದಾಣಗಳು 2024ರ ಏಪ್ರಿಲ್ 29ರಂದು ಮೇಲ್‌ನಲ್ಲಿ ಬಾಂಬ್ ಬೆದರಿಕೆಯನ್ನು ಸ್ವೀಕರಿಸಿವೆ. ಈ ಮೇಲ್ ಅನ್ನು ವಿಮಾನ ನಿಲ್ದಾಣಗಳು ಮತ್ತು ಭದ್ರತಾ ಏಜೆನ್ಸಿಗಳ 90+ ಇಮೇಲ್ ಐಡಿಗಳಿಗೆ ಕಳುಹಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com