ಎಚ್ ಡಿ ರೇವಣ್ಣ ಬಂಧನ ಬೆನ್ನಲ್ಲೇ HD ಕುಮಾರಸ್ವಾಮಿ ಮಹತ್ವದ ಸಭೆ; ಅಮಾನತು ಸಾಧ್ಯತೆ

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ಜೆಡಿಎಸ್ ಶಾಸಕರ ಎಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಜೆಡಿಎಸ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ಜೆಡಿಎಸ್ ಶಾಸಕರ ಎಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಜೆಡಿಎಸ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ಎಚ್ ಡಿ ರೇವಣ್ಣ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣ ದಾಖಲಾಗಿದೆ. ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದು, ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.

ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳು ಜೆಡಿಎಸ್ ಗೆ ತೀವ್ರ ಮುಜುಗರ ತಂದಿಟ್ಟಿದೆ. ಹೀಗಾಗಿ ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇನ್ನು ಇಂದು ರೇವಣ್ಣ ಬಂಧನಕ್ಕೀಡಾಗಿದ್ದರಿಂದ ಮುಜುಗರದಿಂದ ತಪ್ಪಿಸಿಕೊಳ್ಳಲು ಎಚ್‌.ಡಿ ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಗ್ರಹ ಚಿತ್ರ
ಅಪಹರಣ ಪ್ರಕರಣ: JDS ಶಾಸಕ ಹೆಚ್.ಡಿ ರೇವಣ್ಣ ಬಂಧನ!

ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿದ್ದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ. ನಿರೀಕ್ಷಣಾ ಜಾಮೀನು ವಜಾಗೊಳ್ಳುತ್ತಿದ್ದಂತೆ ಹೆಚ್.ಡಿ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಪಹರಣಕ್ಕೀಡಾಗಿದ್ದ ಎಚ್ ಡಿ ರೇವಣ್ಣ ಮನೆ ಕೆಲಸದಾಕೆ ರಕ್ಷಣೆ

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು SIT ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಏಪ್ರಿಲ್ 29ರಂದು ರೇವಣ್ಣ ಅವರ ಸಂಬಂಧ ಸತೀಶ್ ಬಾಬು ಎಂಬುವರು ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು. ಈ ಸಂಬಂಧ ತನಿಖೆ ತೀವ್ರಗೊಳಿಸಿದ್ದ ಎಸ್ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ರೇವಣ್ಣರ ಪಿಎ ರಾಜಶೇಖರ ಎಂಬುವರ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿರುವ ಎಸ್ಐಟಿ ಅಧಿಕಾರಿಗಳು ಆಕೆಯನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com