ಅಪಹರಣಕ್ಕೀಡಾಗಿದ್ದ ಎಚ್ ಡಿ ರೇವಣ್ಣ ಮನೆ ಕೆಲಸದಾಕೆ ರಕ್ಷಣೆ; ಪಿಎ ತೋಟದ ಮನೆಯಲ್ಲಿ ಪತ್ತೆ!

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು SIT ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಎಚ್ ಡಿ ರೇವಣ್ಣ
ಎಚ್ ಡಿ ರೇವಣ್ಣ

ಹುಣಸೂರು: ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು SIT ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಏಪ್ರಿಲ್ 29ರಂದು ರೇವಣ್ಣ ಅವರ ಸಂಬಂಧ ಸತೀಶ್ ಬಾಬು ಎಂಬುವರು ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು. ಈ ಸಂಬಂಧ ತನಿಖೆ ತೀವ್ರಗೊಳಿಸಿದ್ದ ಎಸ್ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ರೇವಣ್ಣರ ಪಿಎ ರಾಜಶೇಖರ ಎಂಬುವರ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿರುವ ಎಸ್ಐಟಿ ಅಧಿಕಾರಿಗಳು ಆಕೆಯನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ.

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್ ಡಿ ರೇವಣ್ಣ 1ನೇ ಆರೋಪಿಯಾಗಿದ್ದಾರೆ. ಇನ್ನು 2ನೇ ಆರೋಪಿಯಾಗಿರುವ ಸತೀಶ್ ಬಾಬುಗೆ ಕೆ.ಆರ್ ನಗರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಎಚ್ ಡಿ ರೇವಣ್ಣ
Prajwal Revanna Sex Case: ಜರ್ಮನಿಯಿಂದ ದುಬೈಗೆ ಹೋಗಿದ್ದ ಪ್ರಜ್ವಲ್ ಈಗ ಅಲ್ಲಿಂದ ಕಾಲ್ಕಿತ್ತು ಹೋಗಿದ್ದಾದರು ಎಲ್ಲಿಗೆ?

ನನ್ನ ತಾಯಿಯನ್ನ ಅಪಹರಿಸಲಾಗಿದೆ ಎಂದು ಆರೋಪಿಸಿ ಶಾಸಕ ಹೆಚ್ ಡಿ ರೇವಣ್ಣ ಮತ್ತು ಸುರೇಶ್ ಬಾಬು ಎಂಬುವವರ ವಿರುದ್ದ ಸಂತ್ರಸ್ತ ಮಹಿಳೆಯ ಪುತ್ರ ಕೆಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಎಫ್ ಐಆರ್ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com