Currency Smuggling: ಚೆನ್ನೈ ಮೂಲದ ವ್ಯಕ್ತಿ ಬಂಧನ, 50 ಲಕ್ಷ ರೂ. ಮೌಲ್ಯದ ಕರೆನ್ಸಿ ವಶಕ್ಕೆ!

50 ಲಕ್ಷಕ್ಕೂ ಅಧಿಕ ಮೌಲ್ಯದ ವಿದೇಶಿ, ಭಾರತೀಯ ಕರೆನ್ಸಿ ನೋಟುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಚೆನ್ನೈ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 50 ಲಕ್ಷಕ್ಕೂ ಅಧಿಕ ಮೌಲ್ಯದ ವಿದೇಶಿ, ಭಾರತೀಯ ಕರೆನ್ಸಿ ನೋಟುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಚೆನ್ನೈ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬ್ಯಾಂಕಾಕ್‌ಗೆ ತೆರಳುತ್ತಿದ್ದ ಸುಮಾರು 22 ವರ್ಷದ ಪುರುಷ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದು, ಆತನ ಬಳಿ ಇದ್ದ ಸುಮಾರು 50 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ವಿದೇಶಿ ಮತ್ತು ಭಾರತೀಯ ಕರೆನ್ಸಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಸಾಂದರ್ಭಿಕ ಚಿತ್ರ
ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರ ಬಂಧನ; ತನಿಖೆ ಇಲ್ಲಿಗೆ ಮುಗಿದಿಲ್ಲ ಎಂದ ಕೆನಡಾ!

ಚೆನ್ನೈ ಮೂಲದ ವ್ಯಕ್ತಿಯೊಬ್ಬರು ಕರೆನ್ಸಿ ನೋಟುಗಳೊಂದಿಗೆ ಬೆಂಗಳೂರಿನಿಂದ ಬ್ಯಾಂಕಾಕ್‌ಗೆ ಥಾಯ್ ಲಯನ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಸಲು ಹೊರಟಿದ್ದಾರೆ ಎಂಬ ನಿರ್ದಿಷ್ಟ ಗುಪ್ತಚರ ವರದಿ ಆಧಾರದ ಮೇಲೆ, ಏಪ್ರಿಲ್ 29 ರಂದು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಅವರನ್ನು ತಡೆದು ತನಿಖೆಗೊಳಪಡಿಸಿದ್ದರು.

ಪ್ರಯಾಣಿಕನ ಬ್ಯಾಗ್ ಮತ್ತು ಅದರಲ್ಲಿದ್ದ ಸಾಮಾನುಗಳನ್ನು ಪರಿಶೀಲಿಸಿದಾಗ, ವಿದೇಶಿ ಕರೆನ್ಸಿ (ಯುಎಸ್ ಡಾಲರ್, ಥಾಯ್ ಬಹ್ತ್, ಮಲೇಷಿಯಾದ ರಿಂಗಿಟ್) 49.82 ಲಕ್ಷ ರೂಪಾಯಿ ಮೌಲ್ಯ ಮತ್ತು 45,000 ರೂಪಾಯಿಗಳ ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿತ್ತು. ಈ ಹಣವನ್ನು ಆಪಾದಿತ ಪ್ರಯಾಣಿಕನಿಂದ ಭಾರತದಿಂದ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಸ್ತುತ ಆತನ ಬಳಿ ಇದ್ದ ಕರೆನ್ಸಿ ನೋಟುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು, ಪ್ರಯಾಣಿಕನನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com