ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಿಎಂ ಸಿದ್ದರಾಮಯ್ಯ-ಎನ್ ಡಿಎ ಮೈತ್ರಿ ಕೂಟಕ್ಕೆ ಪ್ರತಿಷ್ಠೆಯ ಕದನ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಅಧಿಸೂಚನೆ ಹೊರಡಿಸಿರುವುದು ಈ ಭಾಗದ ಮತದಾರರು ಮತ್ತು ಜನನಾಯಕರು ಮತ್ತೆ ಚುನಾವಣಾ ಮೂಡ್‌ಗೆ ಜಾರುವಂತೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿಸಿ ಜನರು ಮತ್ತು ರಾಜಕಾರಣಿಗಳು ಇನ್ನೂ ಹೊರಬಂದಿಲ್ಲ, ಈ ನಡುವೆಯೇ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಅಧಿಸೂಚನೆ ಹೊರಡಿಸಿರುವುದು ಈ ಭಾಗದ ಮತದಾರರು ಮತ್ತು ಜನನಾಯಕರು ಮತ್ತೆ ಚುನಾವಣಾ ಮೂಡ್‌ಗೆ ಜಾರುವಂತೆ ಮಾಡಿದೆ.

ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಹೊರತಾಗಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಇದು ಮತ್ತೊಮ್ಮೆ ಪ್ರತಿಷ್ಠಿತ ಕದನವಾಗಿದೆ.

2000ನೇ ಇಸವಿಯಲ್ಲಿ ಕಾಂಗ್ರೆಸ್ ಒಮ್ಮೆ ಮಾತ್ರ ಚುನಾವಣೆಯಲ್ಲಿ ಗೆದ್ದಿತ್ತು, ಆದರೆ ಕ್ಷೇತ್ರವು ಹಲವು ವರ್ಷಗಳಿಂದ ಜನತಾ ಪರಿವಾರದ ಭದ್ರಕೋಟೆಯಾಗಿ ಉಳಿದಿದೆ. ಜೆಡಿಎಸ್ ತೊರೆದಿರುವ ಹಾಲಿ ಎಂಎಲ್ಸಿ ಮರಿತಿಬ್ಬೇಗೌಡ ಈಗ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಟಿಕೆಟ್ ಖಚಿತವಾಗಿದ್ದು, ಸತತ ಐದನೇ ಗೆಲುವಿಗೆ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ.

ಸಾಂದರ್ಭಿಕ ಚಿತ್ರ
ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 3 ರಂದು ಮತದಾನ

ಮರಿತಿಬ್ಬೇಗೌಡರು 2000ನೇ ಇಸವಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಕಾಂಗ್ರೆಸ್, ಜೆಡಿಎಸ್ ಟಿಕೆಟ್‌ಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಒಂದು ಬಾರಿ ಜೆಡಿಎಸ್ ಪಕ್ಷ ಗೌಡರಿಗೆ ಟಿಕೆಟ್ ನಿರಾಕರಿಸಿ ನಿವೃತ್ತ ಡಿಡಿಪಿಐ ಶಾರದಮ್ಮ ಅವರನ್ನು ಕಣಕ್ಕಿಳಿಸಿತು. ಆ ವೇಳೆ ಮರಿತಿಬ್ಬೇಗೌಡರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಮು ಅವರಿಗೆ ಅವಕಾಶ ಕಲ್ಪಿಸುವ ಸಲುವಾಗಿ ದಕ್ಷಿಣ ಪದವೀಧರ ಕ್ಷೇತ್ರದಿಂದ ತಮ್ಮ ಆಪ್ತ ಮತ್ತು ಮಾಜಿ ಸೆನೆಟ್ ಸದಸ್ಯ ಜೈರಾಮ್ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ವಿರುದ್ಧ ಅಸಮಾಧಾನಗೊಂಡ ಮರಿತಿಬ್ಬೇಗೌಡ ಪಕ್ಷ ತೊರೆದರು.

ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ನಾಯಕರ ಜೊತೆ ಒಡನಾಟ ಬೆಳೆಸಿಕೊಂಡಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಜೂನ್ 3ಕ್ಕೆ ಚುನಾವಣೆ ನಡೆಯಲಿದ್ದು, ಜೆಡಿಎಸ್ ಮತ್ತು ಬಿಜೆಪಿಯಲ್ಲಿ ಲಾಬಿ ತೀವ್ರಗೊಂಡಿದೆ.

ಸಾಂದರ್ಭಿಕ ಚಿತ್ರ
ಕರ್ನಾಟಕ ಎಂಎಲ್ ಸಿ ಚುನಾವಣೆ: ಸ್ಪರ್ಧಿಸಲು ಅಭ್ಯರ್ಥಿಗೆ ಬೇಕು 20 ರಿಂದ 30 ಕೋಟಿ ರೂ.!

ಮಾಜಿ ಎಂಎಲ್ ಸಿ ಕೆ.ಟಿ.ಶ್ರೀಕಂಠೇಗೌಡ ಪ್ರಯತ್ನ ನಡೆಸುತ್ತಿದ್ದು, ಜೆಡಿಎಸ್ ಮುಖಂಡ ವಿವೇಕಾನಂದ ಹಾಗೂ ಮಾಜಿ ಸಿಂಡಿಕೇಟ್ ಸದಸ್ಯ ಲಿಂಗರಾಜೇಗೌಡ ಕೂಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಪರಿಷತ್ ಮತ್ತು ನಗರ/ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೈತ್ರಿ ಮುಂದುವರಿಸಲು ಉತ್ಸುಕರಾಗಿರುವ ಬಿಜೆಪಿ-ಜೆಡಿಎಸ್ ನಾಯಕರು ಇನ್ನೂ ಸಭೆ ನಡೆಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.

ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜಕೀಯ ಪ್ರಭಾವ ಇರುವ ಈ ಕ್ಷೇತ್ರ ಗೆಲ್ಲಲು ಜೆಡಿಎಸ್- ಬಿಜೆಪಿ ಮೈತ್ರಿ ಪ್ರಬಲ ಪ್ರಯತ್ನ ನಡೆಸಲಿದೆ.

ಇಲ್ಲಿನ ಗೆಲುವು ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ದಾರಿ ಮಾಡಿಕೊಡಲಿದೆ. ಒಂದು ವೇಳೆ ಹಳೆ ಮೈಸೂರು ಭಾಗ ಮತ್ತು ಒಕ್ಕಲಿಗ ಹೃದಯಭಾಗದ ಸೋಲು ಬಿಜೆಪಿ ಮತ್ತು ಜೆಡಿಎಸ್ ಎರಡಕ್ಕೂ ಭಾರಿ ಹಿನ್ನಡೆಯಾಗಲಿದ್ದು, ಮೈತ್ರಿಯಲ್ಲಿ ಬಿರುಕು ಮೂಡುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com