Prajwal Revanna Sex Case: ಜರ್ಮನಿಯಿಂದ ದುಬೈಗೆ ಹೋಗಿದ್ದ ಪ್ರಜ್ವಲ್ ಈಗ ಅಲ್ಲಿಂದ ಕಾಲ್ಕಿತ್ತು ಹೋಗಿದ್ದಾದರು ಎಲ್ಲಿಗೆ?

ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋಗಳು ಹೊರಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಅವರು ಇದೀಗ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ಮುಂದುವರಿಸಿದ್ದಾರೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
Updated on

ಬೆಂಗಳೂರು/ನವದೆಹಲಿ: ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋಗಳು ಹೊರಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಅವರು ಇದೀಗ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ಮುಂದುವರಿಸಿದ್ದಾರೆ.

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್ 26ರಂದು ಮತದಾನ ನಡೆದ ಬೆನ್ನಲ್ಲೇ ಅಶ್ಲೀಲ ವಿಡಿಯೊಗಳು ವೈರಲ್‌ ಆಗಿತ್ತು. ಇದರಿಂದಾಗಿ ಪ್ರಜ್ವಲ್ ರೇವಣ್ಣ ಮೊದಲಿಗೆ ಜರ್ಮನಿಗೆ ತೆರಳಿದ್ದರು. ನಂತರ ಅಲ್ಲಿಂದ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಇದೀಗ ಅವರ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಯಾಗುತ್ತದೆ ಎಂಬ ಆತಂಕ ಬೆನ್ನಲ್ಲೇ ಈಗ ಮತ್ತೊಂದು ದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದ್ದು, ಪ್ರಸ್ತುತ ಅವರು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರ ಪಾಸ್‌ಪೋರ್ಟ್‌ ಎಂಟ್ರಿ ಮಾಹಿತಿಯ ಮೇರೆಗೆ ಒಂದಷ್ಟು ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್‌ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ ವಿರುದ್ಧ CBI ಬ್ಲೂ ಕಾರ್ನರ್ ನೊಟೀಸ್ ಜಾರಿ ಸಾಧ್ಯತೆ: SIT

ಪ್ರಕರಣ ಸಂಬಂಧ ಸಿದ್ದರಾಮಯ್ಯ ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೂಕ್ತ ಕ್ರಮಗಳೊಂದಿಗೆ ಮುನ್ನಡೆಯಲಿದ್ದೇವೆ. ಸಿಬಿಐ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಲಿದ್ದು, ಇದು ತನಿಖೆಯನ್ನು ಚುರುಕುಗೊಳಿಸಲಿದೆ ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ದಾರೆಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com