ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಂತ್ರಸ್ತೆಯರಿಗೆ ಎಲ್ಲಾ ನೆರವನ್ನು ನೀಡುವಂತೆ ಅವರು ಮನವಿ ಮಾಡಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಂತ್ರಸ್ತೆಯರಿಗೆ ಎಲ್ಲಾ ನೆರವನ್ನು ನೀಡುವಂತೆ ಅವರು ಮನವಿ ಮಾಡಿದ್ದಾರೆ. ಇಂತಹ ಘೋರ ಕೃತ್ಯದಲ್ಲಿ ಭಾಗಿಯಾದ ಎಲ್ಲರನ್ನೂ ಕಾನೂನು ಕ್ರಮದ ವ್ಯಾಪ್ತಿಗೆ ತರಬೇಕಾದ ಸಾಮೂಹಿಕ ಹೊಣೆಗಾರಿಕೆ ನಮ್ಮ ಮೇಲಿದೆ ಎಂದಿದ್ದಾರೆ.

ರಾಹುಲ್ ಗಾಂಧಿ
ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡಿ, ಪ್ರಧಾನಿ ಮೋದಿಗೆ ಮತ್ತೊಮ್ಮೆ ಸಿಎಂ ಆಗ್ರಹ

ಪ್ರಜ್ವಲ್ ರೇವಣ್ಣ ಹಲವು ವರ್ಷಗಳಿಂದ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ತನ್ನನ್ನು ಸಹೋದರ, ಮಗನಂತೆ ಭಾವಿಸಿದ ಹಲವು ಮಹಿಳೆಯರನ್ನೂ ಹಿಂಸಿಸಿದ್ದು, ಆ ಮಹಿಳೆಯರ ಗೌರವವನ್ನು ಹಾಳು ಮಾಡಿದ್ದಾರೆ. ಅತ್ಯಾಚಾರ ನಡೆಸಿರುವ ವ್ಯಕ್ತಿಗೆ ಕಾನೂನಿನಲ್ಲಿ ಸಾಧ್ಯವಿರುವ ಅತ್ಯಂತ ಕಠಿಣ ಶಿಕ್ಷೆ ಆಗಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಹಿನ್ನೆಲೆ ಕುರಿತು 2023ರ ಡಿಸೆಂಬರ್ ನಲ್ಲಿಯೇ ಬಿಜೆಪಿ ಮುಖಂಡ ಜಿ. ದೇವರಾಜೇಗೌಡ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದೂ ಮಾಹಿತಿ ನೀಡಿದ್ದರೂ, ಪ್ರಧಾನಿ ಮೋದಿ ಮಾಸ್ ರೆಫಿಸ್ಟ್ ವಿರುದ್ಧ ಮತಯಾಚಿಸಿರುವುದು ಆಘಾತಕಾರಿ ಸಂಗತಿ ಎಂದಿದ್ದಾರೆ.

ರಾಹುಲ್ ಗಾಂಧಿ
ಪ್ರಜ್ವಲ್ ರೇವಣ್ಣಗೆ ಸಂಕಷ್ಟ: ಅತ್ಯಾಚಾರ ಪ್ರಕರಣ ದಾಖಲು. ಸಂತ್ರಸ್ತೆ ನಾಪತ್ತೆ; ರೇವಣ್ಣ ವಿರುದ್ಧ FIR!

ಪ್ರಜ್ವಲ್ ವಿರುದ್ಧದ ಆರೋಪಗಳ ಕುರಿತ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ. ಆರೋಪಿಯ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುವಂತೆ ಪ್ರಧಾನಿಗೆ ಪತ್ರವನ್ನೂ ಬರೆದಿದೆ. ಪಾಸ್ ಪೋರ್ಟ್ ರದ್ದುಗೊಳಿಸಿ ಆದಷ್ಟು ಬೇಗ ಆರೋಪಿಯನ್ನು ವಶಕ್ಕೆ ಪಡೆಯಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com