
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಎಸ್ ಐಟಿ ಚುರುಕುಗೊಳಿಸಿದ್ದು, ಇಂದು ಸಂತ್ರಸ್ತೆಯರ ಜೊತೆಗೆ ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ.
ಹಾಸನದ ಆರ್ ಸಿ ರಸ್ತೆಯಲ್ಲಿರುವ ಪ್ರಜ್ವಲ್ ರೇವಣ್ಣ ಅವರ ನಿವಾಸದಲ್ಲಿ ಅತ್ಯಾಚಾರ ನಡೆದಿದೆ ಎಂದು ಸಂತ್ರಸ್ತೆಯರು ಸೆಕ್ಷನ್ 164 ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಿನ್ನೆ ಹಾಸನದ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದ ಎಸ್ ಐಟಿ ತಂಡ ಇಂದು, ರೇವಣ್ಣ ನಿವಾಸದಲ್ಲಿ ಸಂತ್ರಸ್ತೆಯರ ಜೊತೆಗೆ ಮಹಜರು ನಡೆಸಿ, ಸಾಕ್ಷ್ಯ ಕಲೆಹಾಕಲಿದೆ. ಎಸ್ ಐಟಿ ತನಿಖೆ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ನಿವಾಸದ ಆವರಣ ನಿಷೇಧಿಸಿ ಗೇಟ್ ಗೆ ಪೊಲೀಸರು ಬೀಗ ಹಾಕಿದ್ದಾರೆ. ನಿನ್ನೆಯವರೆಗೂ ಮನೆಗೆ ಬೀಗ ಹಾಕಿರಲಿಲ್ಲ.
ಹೆಚ್ ಡಿ ರೇವಣ್ಣಗೆ ಜೈಲಾ ಅಥವಾ ಬೇಲಾ ಈ ಮಧ್ಯೆ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರು ಬಂಧನ ಭೀತಿ ಎದುರಿಸುತ್ತಿದ್ದು, ಗುರುವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ಅವರಿಗೆ ಜೈಲಾ ಅಥವಾ ಬೇಲಾ ಎಂಬುದು ನಿರ್ಧಾರವಾಗಲಿದೆ.
ಎಸ್ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.
Advertisement