ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ, ಮಧ್ಯಾಹ್ನ 2-45ಕ್ಕೆ ಮುಂದೂಡಿಕೆ

ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಾಹ್ನ 2-45ಕ್ಕೆ ಮುಂದೂಡಿದೆ.
ಹೆಚ್. ಡಿ. ರೇವಣ್ಣ
ಹೆಚ್. ಡಿ. ರೇವಣ್ಣ

ಬೆಂಗಳೂರು: ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಾಹ್ನ 2-45ಕ್ಕೆ ಮುಂದೂಡಿದೆ.

ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ರೇವಣ್ಣ ವಕೀಲರ ಮೂಲಕ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅರ್ಜಿ ವಿಚಾರಣೆ ನಡೆಸಿದರು.

ಹೆಚ್. ಡಿ. ರೇವಣ್ಣ
Prajwal Revanna Case: ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ; ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು!

ಈ ಪ್ರಕರಣದಲ್ಲಿ ಹೆಚ್. ಡಿ.ರೇವಣ್ಣ ಹಾಗೂ ಸತೀಶ್ ಬಾಬು ಆರೋಪಿಗಳಾಗಿದ್ದಾರೆ. ನ್ಯಾಯಾಧೀಶರು ವಿಚಾರಣೆಯನ್ನು ಮಧ್ಯಾಹ್ನ 2-45ಕ್ಕೆ ಮುಂದೂಡಿದ್ದಾರೆ.ನಿನ್ನೆ ಈ ಪ್ರಕರಣದ ವಾದ ಆಲಿಸಿದ ನ್ಯಾಯಪೀಠ, ಎಸ್ ಐಟಿ ಪರ ಎಸ್ ಪಿಪಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com