ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ಕೋಚಿಂಗ್ ಸೆಂಟರ್‌ ಕೈವಾಡ; KAMS

ಈ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಿಇಟಿ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳು ಕಾಣಿಸಿಕೊಂಡ ನಂತರ ವಿದ್ಯಾರ್ಥಿಗಳು ಗೊಂದಲಕ್ಕೆ ಬಿದ್ದಿದ್ದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಈ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಿಇಟಿ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳು ಕಾಣಿಸಿಕೊಂಡ ನಂತರ ವಿದ್ಯಾರ್ಥಿಗಳು ಗೊಂದಲಕ್ಕೆ ಬಿದ್ದಿದ್ದರು.

ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್‌ಗಳು (ಕೆಎಎಂಎಸ್) ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರಿಗೆ ಪತ್ರ ಬರೆದಿದ್ದು, ಇಂತಹ ಗೊಂದಲಮಯ ಪ್ರಶ್ನೆಪತ್ರಿಕೆಗಳನ್ನು ರೂಪಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿವೆ.

ಪಠ್ಯಕ್ರಮದ ಹೊರಗಿರುವ ಪ್ರಶ್ನೆಗೆ ಗ್ರೇಸ್ ಅಂಕಗಳನ್ನು ನೀಡಲು ಸರ್ಕಾರ ನಿರ್ಧರಿಸಿದ್ದರೂ, ಸಂಘವು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮತ್ತು ಈ ವಿಷಯದ ಬಗ್ಗೆ ತನಿಖೆಗೆ ಕೋರಿದೆ. ಅನೇಕ ಕೋಚಿಂಗ್ ಸೆಂಟರ್‌ಗಳು ಶಿಕ್ಷಣ ಇಲಾಖೆ ನೌಕರರೊಂದಿಗೆ ಶಾಮೀಲಾಗಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿ ಅಡ್ಡಿಪಡಿಸುತ್ತಿದ್ದು, ಅವರಿಗೆ ಶಿಕ್ಷೆಯಾಗಬೇಕು ಎಂದು ಕೆಎಎಂಎಸ್ ಪತ್ರದಲ್ಲಿ ಆರೋಪಿಸಿದೆ.

ಸಾಂದರ್ಭಿಕ ಚಿತ್ರ
KCET exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳು; ವಿದ್ಯಾರ್ಥಿಗಳಲ್ಲಿ ಆತಂಕ, ಗೊಂದಲ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com