ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಇತರರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಎಸ್‌ಸಿ ಮತ್ತು ಎಸ್‌ಟಿ ಸಮುದಾಯದವರು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಚುನಾವಣಾ ಆಯೋಗವನ್ನು ಭಾನುವಾರ ಕೋರಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಎಸ್‌ಸಿ ಮತ್ತು ಎಸ್‌ಟಿ ಸಮುದಾಯದವರು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಚುನಾವಣಾ ಆಯೋಗವನ್ನು ಭಾನುವಾರ ಕೋರಿದೆ.

ಕರ್ನಾಟಕ ಬಿಜೆಪಿ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಡಿಯೋ ಕುರಿತು ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ದೂರು ನೀಡಿದೆ. ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್ ಮಾಳವಿಯಾ ನಿರ್ವಹಿಸುತ್ತಿರುವ ಕರ್ನಾಟಕ ಬಿಜೆಪಿಯ ಅಧಿಕೃತ ಖಾತೆಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿ ಬಿವೈ ವಿಜಯೇಂದ್ರ ಅವರ ಸೂಚನೆ ಮೇರೆಗೆ ಮೇ 4 ರಂದು ಸಂಜೆ 5.34ಕ್ಕೆ ಈ ವಿಡಿಯೋವನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ವಿಡಿಯೋದಲ್ಲಿ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಅನಿಮೇಟೆಡ್ ಚಿತ್ರಗಳಿವೆ. ಕ್ಲಿಪ್‌ನಲ್ಲಿ, ಗೂಡೊಂದರಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯವನ್ನು 'ಮೊಟ್ಟೆ' ಎಂದು ಚಿತ್ರಿಸಲಾಗಿದೆ. ಬಳಿಕ ರಾಹುಲ್ ಗಾಂಧಿ ಅವರು ಅದೇ ಗೂಡಿಗೆ ಮುಸ್ಲಿಂ ಸಮುದಾಯ ಎಂದು ಲೇಬಲ್ ಮಾಡಿದ ದೊಡ್ಡ ಮೊಟ್ಟೆಯನ್ನು ತಂದಿಡುತ್ತಾರೆ. ಮೊಟ್ಟೆ ಒಡೆದ ಬಳಿಕ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಎಲ್ಲಾ ಅನುದಾನವನ್ನು ನೀಡಲಾಗುತ್ತದೆ. ನಂತರ ಅದು SC, ST ಮತ್ತು OBC ಸಮುದಾಯವನ್ನು ಗೂಡಿನಿಂದ ಹೊರಹಾಕುವುದನ್ನು ಸೂಚಿಸುತ್ತದೆ.

ಪ್ರಾತಿನಿಧಿಕ ಚಿತ್ರ
ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ ಹೇಳಿಕೆ: ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸುವ ಉದ್ದೇಶದಿಂದ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ ಎಂದು ಕೆಪಿಸಿಸಿ ಆರೋಪಿಸಿದೆ.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಎಲ್ಲಿಯೂ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಕ್ಕೆ ಅನುದಾನ ಕಡಿತಗೊಳಿಸಲಾಗುವುದು ಮತ್ತು ಅದನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಾಗುವುದು ಎಂದು ಉಲ್ಲೇಖಿಸಿಲ್ಲ. ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಒಬಿಸಿ ವರ್ಗಕ್ಕೆ ಸೇರಿಸಿದೆ ಎಂದು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಮತ್ತು ಇಂತಹ ಸುಳ್ಳು ಪ್ರಚಾರದ ಮೂಲಕ ಕೇಸರಿ ಪಕ್ಷವು ಲೋಕಸಭಾ ಚುನಾವಣೆಯ ಸಮಯದಲ್ಲಿ ಮತಯಾಚನೆ ಮಾಡುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದೆ.

ಎಸ್‌ಸಿ/ಎಸ್‌ಟಿ ಸಮುದಾಯದವರಿಗೆ ಮೀಸಲಿಟ್ಟ ಹಣವನ್ನು ಮುಸ್ಲಿಮರು ಕಸಿದುಕೊಳ್ಳುತ್ತಾರೆ ಎಂದು ಬಿಂಬಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದಂತೆ ಬೆದರಿಕೆ ಹಾಕುವ ಉದ್ದೇಶದಿಂದಲೇ ಅವರು ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಅದು ಹೇಳಿದೆ.

ಪ್ರಾತಿನಿಧಿಕ ಚಿತ್ರ
ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ: ಬಿ ವೈ ವಿಜಯೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಈ ಕೃತ್ಯವು ಉದ್ದೇಶಪೂರ್ವಕವಾಗಿ ಗಲಭೆಯನ್ನು ಪ್ರಚೋದಿಸುವುದು ಮತ್ತು ವಿವಿಧ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕದಂತೆ ಎಸ್‌ಸಿ/ಎಸ್‌ಟಿ ಸಮುದಾಯದವರನ್ನು ಬೆದರಿಸುವುದು ಮತ್ತು ಎಸ್‌ಸಿ/ಎಸ್‌ಟಿ ಸಮುದಾಯದ ಸದಸ್ಯರ ವಿರುದ್ಧ ದ್ವೇಷವನ್ನು ಉಂಟುಮಾಡುವುದಾಗಿದೆ ಎಂದು ಪತ್ರದಲ್ಲಿ ದೂರಲಾಗಿದ್ದು, ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com