ಮಹಿಳೆ ಅಪಹರಣ ಪ್ರಕರಣ: ಶಾಸಕ ಹೆಚ್.ಡಿ.ರೇವಣ್ಣ 4 ದಿನ SIT ವಶಕ್ಕೆ

ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ಹಿರಿಯ ನಾಯಕ ಹೆಚ್. ಡಿ. ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಎಸ್ ಐಟಿ ವಶಕ್ಕೆ ನ್ಯಾಯಾಲಯ ನೀಡಿದೆ.
ಹೆಚ್. ಡಿ. ರೇವಣ್ಣ
ಹೆಚ್. ಡಿ. ರೇವಣ್ಣ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ಹಿರಿಯ ನಾಯಕ ಹೆಚ್. ಡಿ. ರೇವಣ್ಣ ಅವರನ್ನು ನ್ಯಾಯಾಲಯ 4 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿದೆ.

ಮೈಸೂರಿನ ಕೆ.ಆರ್. ನಗರದಲ್ಲಿ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರನ್ನು ಭಾನುವಾರ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೋರಮಂಗಲದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ರವೀಂದ್ರ ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಲಾಯಿತು.

ಹೆಚ್. ಡಿ. ರೇವಣ್ಣ
'ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ದುರುದ್ದೇಶದಿಂದ ಬಂಧನ': ಹೆಚ್. ಡಿ. ರೇವಣ್ಣ

ಈ ವೇಳೆ ಹೆಚ್. ಡಿ. ರೇವಣ್ಣ ಪರ ವಕೀಲರು ವಾದ ಹಾಗೂ ಎಸ್ ಐಟಿ ಮನವಿಯನ್ನು ನ್ಯಾಯಾಧೀಶರು ಆಲಿಸಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ ರೇವಣ್ಣ ಅವರನ್ನು ವಶಕ್ಕೆ ನೀಡಬೇಕೆಂದು ಎಸ್ ಐಟಿ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿತು. ನಂತರ ನ್ಯಾಯಾಧೀಶರು ಮೇ.8ರವರೆಗೂ ರೇವಣ್ಣ ಅವರನ್ನು ಎಸ್ ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದರು.

ಹೆಚ್. ಡಿ. ರೇವಣ್ಣ
ಅಪಹರಣ ಪ್ರಕರಣ: JDS ಶಾಸಕ ಹೆಚ್.ಡಿ.ರೇವಣ್ಣ ಬಂಧನ!

ಇದಕ್ಕೂ ಮುನ್ನಾ ನಾನು ಯಾವುದೇ ತಪ್ಪು ಮಾಡಿಲ್ಲ, ಅನ್ಯಾಯ ಮಾಡಿಲ್ಲ, ರಾಜಕೀಯ ದುರುದ್ದೇಶದ ಷಡ್ಯಂತ್ರದಿಂದ ನನ್ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು, ರಾಜಕೀಯ ಭವಿಷ್ಯ ಹಾಳು ಮಾಡಿದ್ದಾರೆ ಎಂದು ನ್ಯಾಯಾಧೀಶರ ಬಳಿ ರೇವಣ್ಣ ಕಣ್ಣೀರು ಹಾಕಿದ್ದಾರೆ. ನಂತರ ಎಸ್ ಐಟಿ ಅಧಿಕಾರಿಗಳು ನೀರು ಕುಡಿಸಿ ಸಮಧಾನ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com