ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗಾಗಿ ಎಸ್ ಐಟಿಯಿಂದ ಸಹಾಯವಾಣಿ ಆರಂಭ!

ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್. ಡಿ. ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯರಿಗಾಗಿ ಎಸ್ ಐಟಿ ಸಹಾಯವಾಣಿ ಆರಂಭಿಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರತಿಭಟನೆ
ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್. ಡಿ. ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯರಿಗಾಗಿ ಎಸ್ ಐಟಿ ಸಹಾಯವಾಣಿ ಆರಂಭಿಸಿದೆ.

ಈ ಪ್ರಕರಣದಲ್ಲಿ ಇನ್ನೂ ಯಾರಾದೂರು ಸಂತ್ರಸ್ತೆಯರಿದ್ದರೆ ಕಾನೂನು ನೆರವು, ರಕ್ಷಣೆ, ದೂರು ನೀಡಲು ಸಹಾಯವಾಣಿಯನ್ನು ತೆರೆಯಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರತಿಭಟನೆ
ಮಹಿಳೆ ಅಪಹರಣ ಪ್ರಕರಣ: ಶಾಸಕ ಹೆಚ್. ಡಿ. ರೇವಣ್ಣ 4 ದಿನ ಎಸ್ ಐಟಿ ವಶಕ್ಕೆ

ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು ಸಹಾಯವಾಣಿ 6360938947 ಗೆ ಕರೆ ಮಾಡಿ ದೂರು ನೀಡಬಹುದು ಎಂದು ವಿಶೇಷ ತನಿಖಾ ದಳದ ಮುಖ್ಯಸ್ಥರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆಯರು ಅಥವಾ ಭಾತ್ಮೀದಾರರು ಯಾರಾದಾರೂ ಇದ್ದಲ್ಲಿ ತಮ್ಮ ಹೇಳಿಕೆಗಳನ್ನು ನೇರವಾಗಿ ತಿಳಿಸಲಾಗದಿದ್ದಲ್ಲಿ ಕರೆ ಮಾಡಿಯೂ ಮಾಹಿತಿ ನೀಡಬಹುದು. ಅಂತವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಎಸ್ ಐಟಿ ತಿಳಿಸಿದೆ.

ಎಸ್ ಐಟಿ ಪ್ರಕಟಣೆ
ಎಸ್ ಐಟಿ ಪ್ರಕಟಣೆ
ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರತಿಭಟನೆ
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣ: ಎಸ್‌ಐಟಿ ಮೊರೆ ಹೋದ ಇನ್ನೂ ಮೂವರು ಸಂತ್ರಸ್ತರು

ಮತ್ತೊಂದೆಡೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹೆಚ್ ಡಿ ರೇವಣ್ಣ ಅವರನ್ನು ಮೇ 8ರವರೆಗೆ ನಾಲ್ಕು ದಿನಗಳ ಎಸ್ ಐಟಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಯಾವುದೇ ಕ್ಷಣದಲ್ಲಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದ್ದು, ಎಸ್ ಐಟಿ ತಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದೆ. ವಿಮಾನ ನಿಲ್ದಾಣಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com