ಲೋಕಸಭೆ ಚುನಾವಣೆ: ಸದ್ದಿಲ್ಲದೆ 2ನೇ ಹಂತದ ಮತದಾನಕ್ಕೆ ರಾಜ್ಯ ಸಜ್ಜು; ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ!

ರಾಜ್ಯದ 14 ಲೋಕಸಭೆ ಕ್ಷೇತ್ರಗಳ ಎರಡೇ ಹಂತದ ಮತದಾನಕ್ಕೆ ದಿನಗಣನೆ ಎದುರಾಗಿದೆ. ಮೇ 7ರಂದು ದೇಶದಲ್ಲಿ ಮೂರನೇ ಹಂತದ ಹಾಗೂ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಿದ್ದವಾಗುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ 14 ಲೋಕಸಭೆ ಕ್ಷೇತ್ರಗಳ ಎರಡೇ ಹಂತದ ಮತದಾನಕ್ಕೆ ದಿನಗಣನೆ ಎದುರಾಗಿದೆ. ಮೇ 7ರಂದು ದೇಶದಲ್ಲಿ ಮೂರನೇ ಹಂತದ ಹಾಗೂ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಿದ್ದವಾಗುತ್ತಿದೆ.

ಹೀಗಾಗಿ ಧ್ವನಿವರ್ಧಕಗಳು, ಮೈಕ್‌ಗಳು, ಬ್ಯಾನರ್‌ಗಳು ಮತ್ತು ಮೆಗಾ ರ್ಯಾಲಿಗಳನ್ನು ಬಳಸಿಕೊಂಡು ಎಲ್ಲಾ ರೀತಿಯ ಅಬ್ಬರದ ರಾಜಕೀಯ ಪ್ರಚಾರವು ಭಾನುವಾರ (ಮೇ 5) ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಅದಾದ ನಂತರ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಮಾತ್ರ ಮನೆ-ಮನೆ ಪ್ರಚಾರ ನಡೆಸಬಹುದು. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ಭಾನುವಾರ ಸಂಜೆ 6 ಗಂಟೆಯಿಂದ ಮತದಾನ ನಡೆಯುವ ಜಿಲ್ಲೆಗಳಲ್ಲಿ ರಾಜ್ಯದ ಗಡಿಗಳನ್ನು ಮುಚ್ಚಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚೇರಿ ತಿಳಿಸಿದೆ. ಸೈಲೆಂಟ್ ಪೀರಿಯಡ್ ನಿಂದ ಚುನಾವಣೆ ಮುಗಿಯುವವರೆಗೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬೇರೆ ರಾಜ್ಯಗಳಿಂದಲೂ ಮದ್ಯ ತರುವಂತಿಲ್ಲ. ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ, ಕರ್ನಾಟಕ ಗಡಿಯಿಂದ 5 ಕಿಮೀ ವ್ಯಾಪ್ತಿಯಲ್ಲಿರುವ ಇತರ ರಾಜ್ಯಗಳ ಮದ್ಯದಂಗಡಿಗಳನ್ನು ಮುಚ್ಚಬೇಕು ಎಂದು ಹೆಚ್ಚುವರಿ ಸಿಇಒ ವೆಂಕಟೇಶ್ ಕುಮಾರ್ ಆರ್ ನ್ಯೂ ಸಂಡೆ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಲೋಕಸಭಾ ಚುನಾವಣೆ 2024: ಮತದಾನಕ್ಕೆ ಬೆಂಗಳೂರು ಜನರ ನೀರಸ ಪ್ರತಿಕ್ರಿಯೆ; ಶೇ.52.81ರಷ್ಟು ಮತದಾನ!

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಉತ್ತರ ಕನ್ನಡ, ಬೆಳಗಾವಿ ಮತ್ತು ವಿಜಯಪುರ ತೆಲಂಗಾಣ, ಆಂಧ್ರಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರದೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

ಸಿಇಒ ಕಚೇರಿಯು ನೆರೆಯ ರಾಜ್ಯಗಳ ರಾಜ್ಯ ಸರ್ಕಾರಗಳಿಗೆ ಮತದಾನ ಮಾಡಲು ಅವಕಾಶ ನೀಡಲು ಎಲ್ಲಾ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ಮೇ 7 ರಂದು ವೇತನ ಸಹಿತ ರಜೆ ನೀಡುವಂತೆ ವಿನಂತಿಸಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಆ ದಿನ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ. ಅಲ್ಲದೆ, ವ್ಯಾಪಾರ ಉದ್ಯಮಗಳು, ಕೈಗಾರಿಕೆಗಳು ಮತ್ತು ಇತರ ಸಂಸ್ಥೆಗಳು ದಿನಗೂಲಿ ನೌಕರರು ಮತ್ತು ಅವರೊಂದಿಗೆ ಕೆಲಸ ಮಾಡುವ ಕಾಯಂ ಸಿಬ್ಬಂದಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ವೇತನ ಸಹಿತ ರಜೆಯನ್ನು ಮಂಜೂರು ಮಾಡುವಂತೆ ಸೂಚಿಸಲಾಗಿದೆ.

ಉತ್ತರ ಕರ್ನಾಟಕದ ಹಲವು ಮಂದಿ ಮಹಾರಾಷ್ಟ್ರ, ಹೈದರಾಬಾದ್ ಮತ್ತಿತರ ಕಡೆ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕರೆಸಿ ಆಯಾ ಕ್ಷೇತ್ರಕ್ಕೆ ಬಂದು ಮತದಾನ ಮಾಡುವಂತೆ ಮನವೊಲಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಯಾವುದೇ ಅಭಿಪ್ರಾಯ ಸಂಗ್ರಹಕ್ಕೆ ಅವಕಾಶವಿಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಮೊದಲನೆ ಹಂತದ ಚುನಾವಣೆಗೆ ಅಭಿಪ್ರಾಯ ಸಂಗ್ರಹದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಏಪ್ರಿಲ್ 19 ರಿಂದ ಜೂನ್ 1 ರ ಸಂಜೆ 6.30 ರವರೆಗೆ ಈ ನಿಷೇಧವಿದೆ ದು ಕುಮಾರ್ ತಿಳಿಸಿದ್ದಾರೆ. ನಿವಾಸಿಗಳನ್ನು ಹೊರತುಪಡಿಸಿ ಯಾರೂ ಕ್ಷೇತ್ರದಲ್ಲಿ ಉಳಿಯದಂತೆ ನೋಡಿಕೊಳ್ಳಲು ಚುನಾವಣಾಧಿಕಾರಿಗಳು ಎಲ್ಲಾ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com