ಹೆಚ್'ಡಿ ರೇವಣ್ಣ ಪ್ರಕರಣದಲ್ಲಿ ಮಧ್ಯಪ್ರವೇಶಿಸುವುದಿಲ್ಲ, ಕಾನೂನು ರೀತಿ ಕ್ರಮ; ಸಿಎಂ ಸಿದ್ದರಾಮಯ್ಯ

ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಚಿಕ್ಕೋಡಿಯಲ್ಲಿ ಶನಿವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೊಳಗಾದ ಮಹಿಳೆಯನ್ನು ರಕ್ಷಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಪ್ರಕರಣದ ಕುರಿತು ಪೊಲೀಸರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ
ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ನೋಡೋ ಧೈರ್ಯ ಬರಲಿಲ್ಲ: ನಿಖಿಲ್ ಕುಮಾರಸ್ವಾಮಿ

ರೇವಣ್ಣ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ರೇವಣ್ಣ ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂಬ ಜೆಡಿಎಸ್ ಮುಖಂಡ ಸಿ.ಎಸ್.ಪುಟ್ಟರಾಜು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪುಟ್ಟರಾಜು ವಕೀಲರೇ ಎಂದು ತಿರುಗೇಟು ವೀಡಿದರು. ಪೊಲೀಸರೊಂದಿಗೆ ಚರ್ಚೆ ನಡೆಸಿ ಪ್ರಕರಣ ಸಂಬಂಧ ಮಾಹಿತಿ ನೀಡುವುದಾಗಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com