ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 1, ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ಅನಾಮಧೇಯ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ ಕೇಸ್ ದಾಖಲು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಟರ್ಮಿನಲ್ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತ ಆರೋಪಿಗಳ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಟರ್ಮಿನಲ್ 1 ಮ್ಯಾನೇಜರ್ ಗೀತಾ ರಾಣಿ ಅವರು ಮೇ 2 ರಂದು ಪೊಲೀಸ್ ಠಾಣೆಗೆ ಭೇಟಿ ದೂರು ನೀಡಿದ್ದಾರೆ. ಏಪ್ರಿಲ್ 29 ರಂದು ಬೆಳಗ್ಗೆ ವಿಮಾನ ನಿಲ್ದಾಣದ ಮೇಲ್ ಐಡಿಗೆ (feedback@bialairport.com) ಕಳುಹಿಸಲಾದ ಮೇಲ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಗೀತಾ ರಾಣಿ ಅವರು, 209.85.218.54 ಐಪಿ ವಿಳಾಸದೊಂದಿಗೆ 666darktriad666@gmail.com ನಿಂದ `Terrorzers111' ಗುಂಪಿನಿಂದ ಮೇಲ್ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಬಾಂಬ್ ಬೆದರಿಕೆ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ!

ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳುವ ಬಾಂಬ್‌ಗಳನ್ನು ಕೆಲವು ವಿಮಾನಗಳಲ್ಲಿ ಇರಿಸಲಾಗಿದೆ ಎಂದು ವಿಮಾನ ನಿಲ್ದಾಣಕ್ಕೆ ಬಂದ ಮೇಲ್‌ನಲ್ಲಿ ತಿಳಿಸಲಾಗಿದೆ. ಅದರ ಜೊತೆಗೆ, ಟರ್ಮಿನಲ್ 1 ರ ಒಳಗೆ ವಿವಿಧ ಹಂತಗಳಲ್ಲಿ ಸ್ಫೋಟಕ ವಸ್ತುಗಳನ್ನು ವಿವೇಚನೆಯಿಂದ ಇರಿಸಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗೀತಾ ರಾಣಿ ಅವರ ದೂರಿನ ಆಧಾರದ ಮೇಲೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ IPC ಸೆಕ್ಷನ್‌ಗಳು 501 (1) (b) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ದುಷ್ಕರ್ಮಿಯ ಪತ್ತೆಗೆ ಪ್ರಯತ್ನ ಮುಂದುವರಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com