ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದ ಫೋಟೋ-ವಿಡಿಯೊ ಹಂಚಿಕೊಳ್ಳುವುದು ಶಿಕ್ಷಾರ್ಹ ಅಪರಾಧ: SIT ಮಾಧ್ಯಮ ಪ್ರಕಟಣೆ

ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಕಾಯ್ದೆ ಕಲಂ 228ಎ(1), ಐಪಿಸಿ ಸೆಕ್ಷನ್ 292ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Published on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ. ವಾಟ್ಸಾಪ್ ಸೇರಿದಂತೆ ಸಾಮಾಜಿಕ ಮಾಧ್ಯಮದ ಯಾವುದೇ ಜಾಲತಾಣಗಳಲ್ಲಿ ವಿಡಿಯೋ ಹರಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಕಾಯ್ದೆ ಕಲಂ 228ಎ(1), ಐಪಿಸಿ ಸೆಕ್ಷನ್ 292ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಕರಣದ ಸಂತ್ರಸ್ತರು ಸಹಾಯವಾಣಿ ಸಂಖ್ಯೆಗೆ(63609 38947) ಕರೆ ಮಾಡಿ ಮಾಹಿತಿ ನೀಡಬಹುದು. ಬೆಳಗ್ಗೆ 8ರಿಂದ ರಾತ್ರಿ 8ರತನಕ ಕರೆ ಮಾಡಿ ಸಂಪರ್ಕಿಸಬಹುದು. ಕರೆ ಮಾಡುವ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುವುದು. ಸಂತ್ರಸ್ತರಿಗೆ ವಿಶೇಷ ತನಿಖಾ ತಂಡ ಅಗತ್ಯ ನೆರವನ್ನು ನೀಡಲಿದೆ ಎಂದು ಪ್ರಕರಣ ಸಂಬಂಧ ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ನಿಮ್ಮ ಜೊತೆ ನಾವಿದ್ದೇವೆ ಎಂದು ದಳಪತಿಗಳಿಗೆ ಧೈರ್ಯ ತುಂಬಿದ ಬಿಜೆಪಿ ಚಾಣಕ್ಯ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com