ದಾವಣಗೆರೆ: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟ; ಸ್ಥಳದಲ್ಲಿಯೇ ಇಬ್ಬರ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲಿಯೇ ಇಬ್ಬರ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಬಳಿ ಭಾನುವಾರ ರಾತ್ರಿ ನಡೆದಿದೆ.
ಸಾಂದರ್ಭಿಕಚಿತ್ರ
ಸಾಂದರ್ಭಿಕಚಿತ್ರ
Updated on: 

ದಾವಣಗೆರೆ: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲಿಯೇ ಇಬ್ಬರ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಬಳಿ ಭಾನುವಾರ ರಾತ್ರಿ ನಡೆದಿದೆ.

ಟೈರ್ ಸಿಡಿದ ರಭಸಕ್ಕೆ ಸೇತುವೆ ಮೇಲಿಂದ ಕಾರು ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾವಣಗೆರೆಯ ಹರಿಹರ ತಾಲ್ಲೂಕಿನ ಸಾರಥಿ ಗ್ರಾಮದ ನಿವಾಸಿ ಕೊಟ್ರೇಶಪ್ಪ (60) ಹುಬ್ಬಳ್ಳಿಯ ಈರಮ್ಮ (54) ಮೃತಪಟ್ಟವರು.‌ ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ,

ದಾವಣಗೆರೆಯ ಕೆಎಚ್‌ಬಿ ಕಾಲೊನಿಯ ನಿವಾಸಿ ಕೊಟ್ರೇಶಪ್ಪ‌ ಮದುವೆ ಮುಗಿಸಿ ಕೊಂಡು ಈರಮ್ಮ ಅವರ ಜೊತೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಒಮ್ಮೆಲೆ ಸ್ಫೋಟಗೊಂಡಿದೆ. ಆಗ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕಾರು ಪಲ್ಟಿಯಾಗಿದೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕಚಿತ್ರ
ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಯಡವಟ್ಟು, 3 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com