ಕಲಬುರಗಿ: ಮಾಜಿ ಕಾಂಗ್ರೆಸ್ ಶಾಸಕ ಡಾ. ನಾಗರೆಡ್ಡಿ ಪಾಟೀಲ್ ನಿಧನ

ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ನಿಧನರಾಗಿದ್ದಾರೆ.
 ಡಾ ನಾಗರೆಡ್ಡಿ ಪಾಟೀಲ್
ಡಾ ನಾಗರೆಡ್ಡಿ ಪಾಟೀಲ್
Updated on

ಕಲಬುರಗಿ: ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ನಿಧನರಾಗಿದ್ದಾರೆ. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿಯಾಗಿದ್ದ ಡಾ.ನಾಗರೆಡ್ಡಿ ಪಾಟೀಲ್ ಅವರು ಮೇ 6 ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಾಗರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್‌ ಅವರ ತಂದೆಯಾಗಿದ್ದಾರೆ. 1983 ರಿಂದ 85 ರ ಅವಧಿಯಲ್ಲಿ ಎರಡೂವರೆ ವರ್ಷ ನಾಗರೆಡ್ಡಿ ಪಾಟೀಲ್‌ ಶಾಸಕರಾಗಿದ್ದರು.ಮೃತರು ಸಹೋದರ, ಸಹೋದರಿಯರು, ಪತ್ನಿ, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮಧ್ಯಾಹ್ನ 3.30 ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 ಡಾ ನಾಗರೆಡ್ಡಿ ಪಾಟೀಲ್
ಸಂಸದ ಶ್ರೀನಿವಾಸ ಪ್ರಸಾದ್ ನಿಧನ; ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಇಂದು ರಜೆ ಘೋಷಣೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com