ರಣಬಿಸಿಲು: ಬೀದರ್‌ನಲ್ಲಿ ಲೋಕಸಭೆ ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತವಾಗಿ ಅಧಿಕಾರಿ ಸಾವು

ಲೋಕಸಭೆ ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ.
ಚುನಾವಣಾಧಿಕಾರಿ ಸಾವು
ಚುನಾವಣಾಧಿಕಾರಿ ಸಾವು

ಬೀದರ್‌: ಲೋಕಸಭೆ ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಸಹಾಯಕ ಕೃಷಿ ಅಧಿಕಾ 31 ವರ್ಷದ ಆನಂದ್ ಎಂದು ಗುರುತಿಸಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೀದರ್ ಸೇರಿದಂತೆ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕೋಡಂಬಲ್ ಚೆಕ್​ಪೋಸ್ಟ್​ನಲ್ಲಿ ಕರ್ತವ್ಯ ನಿರ್ವಹಿಸುವಾಗ ಆನಂದ್ ಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುಲು ಮುಂದಾಗಿದ್ದು ಆದರೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಚುನಾವಣಾಧಿಕಾರಿ ಸಾವು
ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ಹಾಜರಾಗಲು ಬಸ್ ಹತ್ತುತ್ತಿದ್ದ ವೇಳೆ ಹೃದಯಾಘಾತದಿಂದ ಸಿಬ್ಬಂದಿ ಸಾವು!

ಬಾಗಲಕೋಟೆ: ಬಸ್ ಹತ್ತುತ್ತಿದ್ದ ವೇಳೆ ಹೃದಯಾಘಾತದಿಂದ ಸಿಬ್ಬಂದಿ ಸಾವು!

ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು, ಬಸ್​ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದಿದೆ. ಶಿಕ್ಷಕನನ್ನು ಗೋವಿಂದಪ್ಪ ಸಿದ್ದಾಪುರ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದ ವೇಳೆ ಅವಘಡ ಸಂಭವಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com