ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ!

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.
ಎಚ್‌ಡಿ ರೇವಣ್ಣ - ಪ್ರಜ್ವಲ್ ರೇವಣ್ಣ
ಎಚ್‌ಡಿ ರೇವಣ್ಣ - ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಇನ್ನೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಸ್ ಐಟಿ ವಶದಲ್ಲಿರುವ ರೇವಣ್ಣ ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಎಚ್‌ಡಿ ರೇವಣ್ಣ - ಪ್ರಜ್ವಲ್ ರೇವಣ್ಣ
SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ ರೇವಣ್ಣ!

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com