ಲೋಕಸಭೆ ಚುನಾವಣೆ ಮುಗಿದ ಬಳಿಕ ಪ್ರಜ್ವಲ್ ವಾಪಸ್? ಬಸವನಗುಡಿಯಲ್ಲಿರುವ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು!

ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣಗಾಗಿ ಸಿಐಡಿಯ ಎಸ್‌ಐಟಿ ಸೋಮವಾರ ಹುಡುಕಾಟ ಮುಂದುವರಿಸಿದೆ.
ಪ್ರಜ್ವಲ್ ರೇವಣ್ಣ, ಹೆಚ್. ಡಿ. ರೇವಣ್ಣ
ಪ್ರಜ್ವಲ್ ರೇವಣ್ಣ, ಹೆಚ್. ಡಿ. ರೇವಣ್ಣ
Updated on

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣಗಾಗಿ ಸಿಐಡಿಯ ಎಸ್‌ಐಟಿ ಸೋಮವಾರ ಹುಡುಕಾಟ ಮುಂದುವರಿಸಿದೆ. ತಲೆಮರೆಸಿಕೊಂಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ಲೋಕಸಭೆ ಚುನಾವಣೆ ನಂತರ ಭಾರತಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಜೆಡಿ (ಎಸ್) ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಕರ್ನಾಟಕದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ನವೀಕರಿಸಿದ ಪ್ರಯಾಣಿಕರ ಪಟ್ಟಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಠಿಕಾಣಿ ಹೂಡಿದ್ದಾರೆ.

ತಂದೆ ಹೆಚ್‌ಡಿ ರೇವಣ್ಣ ಬಂಧನದ ಹಿನ್ನೆಲೆಯಲ್ಲಿ ಹಾಲಿ ಸಂಸದ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಶರಣಾಗಲಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಸಿಎಸ್ ಪುಟ್ಟರಾಜು ಸುಳಿವು ನೀಡಿದ್ದರು. ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿಸಲಾಗಿತ್ತು. ಇದೇ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

ಪ್ರಜ್ವಲ್ ರೇವಣ್ಣ, ಹೆಚ್. ಡಿ. ರೇವಣ್ಣ
ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಬಂಧನ ಬೆನ್ನಲ್ಲೇ ಭವಾನಿ ರೇವಣ್ಣಗೂ ಕಾನೂನು ಸಂಕಷ್ಟ ಶುರು!

ಏತನ್ಮಧ್ಯೆ, ಸೆಕ್ಸ್ ವಿಡಿಯೋ ಹಗರಣದ ಸಂತ್ರಸ್ತರೊಬ್ಬರನ್ನು ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ಮಾಡಲು ಬೆಂಗಳೂರಿನ ಬಸವನಗುಡಿಯಲ್ಲಿರುವ ಎಚ್‌ಡಿ ರೇವಣ್ಣ ಅವರ ನಿವಾಸಕ್ಕೆ ಕರೆದೊಯ್ದಿದ್ದಾರೆ. ಇನ್ನೂ ಎಸ್ ಐ ಟಿ ವಶದಲ್ಲಿರುವ ಮಾಜಿ ಸಚಿವ ರೇವಣ್ಣ ಅಧಿಕಾರಿಗಳು ಕೇಳುವ ಯಾವುದೇ ಪ್ರಶ್ನೆಗೆ ಸರಿಯಾಗಿ ಉತ್ತರಿಸುತ್ತಿಲ್ಲ ಎಂದು ತಿಳಿದು ಬಂದಿದೆ.

ಏನೇ ಪ್ರಶ್ನೆ ಕೇಳಿದರೂ ನನಗೆ ಗೊತ್ತಿಲ್ಲ, ನಾನು ಏನು ಮಾಡಿಲ್ಲ, ನನ್ನ ರಾಜಕೀಯ ಭವಿಷ್ಯ ಹಾಳು ಮಾಡಲು ಪಿತೂರಿ ನಡೆಸಿದ್ದಾರೆ ಎಂದು ಹೇಳುತ್ತಿರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com