SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ.ರೇವಣ್ಣ!

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.
ಎಚ್. ಡಿ. ರೇವಣ್ಣ
ಎಚ್. ಡಿ. ರೇವಣ್ಣ
Updated on

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.

ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಂದರ್ಭದಲ್ಲಿ ಎಚ್‌.ಡಿ.ರೇವಣ್ಣ ಅವರು ಮೂರು ನಿಂಬೆಹಣ್ಣು ಕೈಯಲ್ಲಿ ಹಿಡಿದುಕೊಂಡಿದ್ದರು. ಪೊಲೀಸ್ ವಾಹನದಿಂದ ಇಳಿದಿದ್ದ ರೇವಣ್ಣ, ನಿಂಬೆ ಹಣ್ಣುಗಳ ಸಮೇತ ನ್ಯಾಯಾಧೀಶರ ಮನೆಯತ್ತ ಹೆಜ್ಜೆ ಹಾಕಿದರು. ವಿಶೇಷ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೂ ರೇವಣ್ಣ ನಿಂಬೆ ಹಣ್ಣು ಬಿಟ್ಟಿರಲಿಲ್ಲ.

ವಿಚಾರಣೆ ವೇಳೆ ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದ್ದ ರೇವಣ್ಣ, ‘ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರು ಈ ರೀತಿ ಮಾಡಿದ್ದಾರೆ. ನನಗೆ ನ್ಯಾಯ ಕೊಡಿ’ ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.

ಎಚ್. ಡಿ. ರೇವಣ್ಣ
ನಾನು ಎಲ್ಲವನ್ನು 'ವಾಸ್ತು ಪ್ರಕಾರ'ವೇ ಮಾಡಿದ್ದೇನೆ, ನೀವು ಕೂಡ ಅದನ್ನೇ ಅನುಸರಿಸಿ: ಜಿಲ್ಲಾಧಿಕಾರಿಗೆ ಎಚ್.ಡಿ ರೇವಣ್ಣ ಸಲಹೆ

ನ್ಯಾಯಾಧೀಶರ ನಿವಾಸದಲ್ಲಿ ಎಚ್​.ಡಿ. ರೇವಣ್ಣ ಪರ ವಕೀಲ ಮತ್ತು ಎಸ್​ಐಟಿ ಅಧಿಕಾರಿಗಳ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರು, ರೇವಣ್ಣರನ್ನು ಮೇ.08ರವರೆಗೆ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ರಾಷ್ಟ್ರಮಟ್ಟದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಒಂದೆಡೆ ವಿದೇಶಕ್ಕೆ ಹಾರಿರುವ ಪ್ರಜ್ವಲ್​ ಬಂಧಿಸಲು ಎಸ್​ಐಟಿ ಅಧಿಕಾರಿಗಳು ಏರ್​ಪೋರ್ಟ್​ನಲ್ಲಿ ಕಾದು ಕುಳಿತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com