ಪ್ರಜ್ವಲ್ ರೇವಣ್ಣ ವಿರುದ್ಧ 'ಬ್ಲೂ ಕಾರ್ನರ್' ನೋಟಿಸ್; 196 ರಾಷ್ಟ್ರಗಳಿಗೆ ಮಾಹಿತಿ ರವಾನೆ: Interpol

ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಿರುವುದಾಗಿ ಇಂಟರ್ ಫೋಲ್ ಮಾಹಿತಿ ನೀಡಿರುವುದಾಗಿ ವಿಶೇಷ ತನಿಖಾ ತಂಡ- ಎಸ್ ಐಟಿ ತಿಳಿಸಿದೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಿರುವುದಾಗಿ ಇಂಟರ್ ಫೋಲ್ ಮಾಹಿತಿ ನೀಡಿರುವುದಾಗಿ ವಿಶೇಷ ತನಿಖಾ ತಂಡ- ಎಸ್ ಐಟಿ ತಿಳಿಸಿದೆ.

ಪ್ರಜ್ವಲ್ ರೇವಣ್ಣ
ಅಪಹರಣ ಪ್ರಕರಣ: HD ರೇವಣ್ಣ 4 ದಿನ SIT ಕಸ್ಟಡಿಗೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್!

ಪ್ರಜ್ವಲ್ ರೇವಣ್ಣ ಯಾವುದೇ ವಿಮಾನ ನಿಲ್ದಾಣ, ಬಂದರು, ಗಡಿಯಲ್ಲಿ ಕಾಣಿಸಿಕೊಂಡರೆ ಮಾಹಿತಿ ನೀಡಲಾಗುವುದು ಎಂದು ಇಂಟರ್ಫೋಲ್ ನಿಂದ ಎಸ್ ಐಟಿಗೆ ನಿನ್ನೆ ಸಂಜೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾಗಿ ಹೆಚ್ಚಿನ ಮಾಹಿತಿ ಸಂಗ್ರಹ ಮಾಡಲು, ಆತನ ಗುರುತು, ಆತ ಇರುವ ನಿಖರ ಸ್ಥಳ ಹಾಗೂ ಆತನ ಚಟುವಟಿಕೆಗಳನ್ನು ಗಮನಿಸಿ ಅಪರಾಧಿಕ ಕೃತ್ಯಗಳ ತನಿಖಾ ತಂಡಕ್ಕೆ ನೆರವಾಗಲು ಬ್ಲೂ ನೋಟಿಸ್ ಜಾರಿ ಮಾಡಲಾಗುತ್ತದೆ. ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಇದೇ ನೋಟಿಸ್ ಜಾರಿಯಾಗಿದೆ.

ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದ ಫೋಟೋ-ವಿಡಿಯೊ ಹಂಚಿಕೊಳ್ಳುವುದು ಶಿಕ್ಷಾರ್ಹ ಅಪರಾಧ: SIT ಮಾಧ್ಯಮ ಪ್ರಕಟಣೆ

ಬ್ಲೂ ಕಾರ್ನರ್ ನೋಟಿಸ್ ಮೂಲಕ ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದಾರೆ, ಅವರು ಏನು ಮಾಡುತ್ತಿದ್ದಾರೆ ಎಂಬುದರ ಮಾಹಿತಿ ಇಂಟರ್ ಫೋಲ್ ನಿಂದ ಎಸ್ ಐಟಿಗೆ ಲಭ್ಯವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com