ಎಚ್‌ಡಿ ರೇವಣ್ಣ
ಎಚ್‌ಡಿ ರೇವಣ್ಣ

ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್‌ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಯಲ್ಲಿ 2 ಗಂಟೆ ಕಾಲ ಚಿಕಿತ್ಸೆ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಸಂತ್ರಸ್ಥೆ ಅಪಹರಣ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.
Published on

ಬೆಂಗಳೂರು: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಸಂತ್ರಸ್ಥೆ ಅಪಹರಣ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

ಸದ್ಯ ಎಸ್ಐಟಿ ವಶದಲ್ಲಿರುವ ರೇವಣ್ಣ ಅವರನ್ನು ಮೊದಲು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಎಸ್ಐಟಿ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಹೈಪರ್ ಗ್ಯಾಸ್ಟ್ರೈಟೀಸ್ ಸಮಸ್ಯೆ ಹಿನ್ನೆಲೆಯಲ್ಲಿ ರೇವಣ್ಣ ಅವರಿಗೆ ಸುಮಾರು ಎರಡು ಗಂಟೆಗಳ ಕಾಲ ಚಿಕಿತ್ಸೆ ನೀಡಲಾಗಿದೆ.

ಈ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಎಸ್​ಪಿ ಸುಮನ್ ಡಿ.ಪನ್ನೇಕರ್​ ಅವರು, ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಚಿಕಿತ್ಸೆ ನಂತರ ರೇವಣ್ಣರನ್ನು ಎಸ್ಐಟಿ ಕಚೇರಿಗೆ ಪೊಲೀಸರು ಕರೆದೊಯ್ದಿದ್ದಾರೆ.

 ಎಚ್‌ಡಿ ರೇವಣ್ಣ
ಪ್ರಜ್ವಲ್ ರೇವಣ್ಣ ವಿರುದ್ಧ 'ಬ್ಲೂ ಕಾರ್ನರ್' ನೋಟಿಸ್; 196 ರಾಷ್ಟ್ರಗಳಿಗೆ ಮಾಹಿತಿ ರವಾನೆ: Interpol

ವಿಶೇಷ ತನಿಖಾ ತಂಡದ(ಎಸ್‌ಐಟಿ) ವಶದಲ್ಲಿರುವ ಎಚ್‌ಡಿ ರೇವಣ್ಣ ಅವರು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಿಂದ ಜಾಮೀನು ಪಡೆಯಲು ವಿಫಲರಾಗಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣದ ಆರೋಪದ ಮೇಲೆ 66 ವರ್ಷದ ಮಾಜಿ ಸಚಿವರನ್ನು ಎಸ್‌ಐಟಿ ಶನಿವಾರ ಬಂಧಿಸಿದ್ದು, ಮೇ 8ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com