ಬೆಂಗಳೂರು: ಎಸ್ ಎಂ ಕೃಷ್ಣ ದಾಖಲಾಗಿರುವ ಆಸ್ಪತ್ರೆಗೆ ಖರ್ಗೆ ಭೇಟಿ, ಶೀಘ್ರ ಚೇತರಿಕೆಗೆ ಹಾರೈಕೆ

ಅನಾರೋಗ್ಯದ ಹಿನ್ನೆಲೆಯಲ್ಲಿ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ದಾಖಲಾಗಿರುವ ಮಣಿಪಾಲ್ ಆಸ್ಪತ್ರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದರು.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ದಾಖಲಾಗಿರುವ ಮಣಿಪಾಲ್ ಆಸ್ಪತ್ರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದರು.

ದಾಖಲಾದ ದಿನಕ್ಕೆ ಹೋಲಿಸಿದರೆ ಪ್ರಸ್ತುತ ಕೃಷ್ಣ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೇಳಿದೆ. ಅವರು ಆಲರ್ಟ್ ಆಗಿದ್ದು, ಒಳ್ಳೆಯ ಮನಸ್ಥಿತಿ ಹೊಂದಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮಣಿಪಾಲ್ ಆಸ್ಪತ್ರೆ ಹೇಳಿದೆ. 91 ವರ್ಷದ ಮಾಜಿ ವಿದೇಶಾಂಗ ಸಚಿವರು ಮೈಸೂರಿನ ಡಾ. ಸತ್ಯ ನಾರಾಯಣ ಅವರ ನೇತೃತ್ವದ ವೈದ್ಯಕೀಯ ತಂಡದ ನಿಗಾವಣೆಯಲ್ಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಎಸ್ ಎಂ ಕೃಷ್ಣ ಅವರು ನಮ್ಮ ಮಾಜಿ ಮುಖ್ಯಮಂತ್ರಿ, ನಾನು ಅವರೊಂದಿಗೆ ರಾಜ್ಯದಲ್ಲಿ ಸಚಿವರಾಗಿ ಕೆಲಸ ಮಾಡಿದ್ದೇನೆ. ಕೇಂದ್ರದಲ್ಲಿ ನನ್ನ ಜೊತೆ ಸಚಿವರಾಗಿದ್ದರು. ಅವರ ಅನಾರೋಗ್ಯದ ಬಗ್ಗೆ ವಿಚಾರಿಸಲು ಇಲ್ಲಿಗೆ ಬಂದಿದ್ದು, ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾಗಿ ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ
ತೀವ್ರ ಉಸಿರಾಟದ ಸೋಂಕು: ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ

ಕೃಷ್ಣ ಅವರ ಆರೋಗ್ಯ ಸುಧಾರಿಸುತ್ತಿದೆ. ಅವರು ಮಾತನಾಡುತ್ತಿದ್ದಾರೆ ಮತ್ತು ನಾನು ಯಾವಾಗ ಬಂದೆ ಎಂದು ಕೇಳಿದರು. ಇತರ ವಿಷಯಗಳ ಬಗ್ಗೆಯೂ ವಿಚಾರಿಸಿದರು. ಅವರು ಮೊದಲಿನಿಂದಲೂ ಶಿಸ್ತಿನ ಜೀವನ ಕಾಪಾಡಿಕೊಂಡು ಬಂದಿದ್ದು, ಮಾನಸಿಕವಾಗಿ ಮತ್ತು ದೈಹಿಕವಾಗಿ ತ್ವರಿತವಾಗಿ ಸುಧಾರಿಸುತ್ತಾರೆ. ವೈದ್ಯರು ಕೂಡ ಕಾಳಜಿ ವಹಿಸುತ್ತಿದ್ದಾರೆ ಎಂದು ಹೇಳಿದರು.

"ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ನಿನ್ನೆ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಕೃಷ್ಣ ಅವರ ಆರೋಗ್ಯ ವಿಚಾರಿಸಿದ್ದರು. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಕೃಷ್ಣ ಅವರನ್ನು ಕಳೆದ ತಿಂಗಳು ಮತ್ತೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿತ್ತು ಎಂದು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com