ಪೆಪ್ಪರ್ ಸ್ಪ್ರೇ ನಿಜಕ್ಕೂ ಅಪಾಯಕಾರಿ ಅಸ್ತ್ರ, ಪ್ರಕರಣ ರದ್ದುಗೊಳಿಸಲ್ಲ ಎಂದ ಹೈಕೋರ್ಟ್!

ಪೆಪ್ಪರ್ ಸ್ಪ್ರೇ ನಿಸ್ಸಂದೇಹವಾಗಿ ಅಪಾಯಕಾರಿ ಅಸ್ತ್ರ ಎಂದು ಉಲ್ಲೇಖಿಸಿರುವ ಹೈಕೋರ್ಟ್, ಇದನ್ನು ಅಸ್ತ್ರವಾಗಿ ಬಳಸುವುದಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಯಾವುದೇ ಕಾನೂನನ್ನು ರೂಪಿಸಲಾಗಿಲ್ಲ ಎಂದು ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪೆಪ್ಪರ್ ಸ್ಪ್ರೇ ನಿಸ್ಸಂದೇಹವಾಗಿ ಅಪಾಯಕಾರಿ ಅಸ್ತ್ರ ಎಂದು ಉಲ್ಲೇಖಿಸಿರುವ ಹೈಕೋರ್ಟ್, ಇದನ್ನು ಅಸ್ತ್ರವಾಗಿ ಬಳಸುವುದಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಯಾವುದೇ ಕಾನೂನನ್ನು ರೂಪಿಸಲಾಗಿಲ್ಲ ಎಂದು ಹೇಳಿದೆ.

ಆದಾಗ್ಯೂ, ಅಮೆರಿಕದಂತಹ ದೇಶದಲ್ಲಿ ಪೆಪ್ಪರ್ ಸ್ಪ್ರೇ ಬಳಕೆಯನ್ನು ಹಾನಿಕಾರಕ ರಾಸಾಯನಿಕ ಸಿಂಪಡಣೆ ಎಂದೇ ಪರಿಗಣಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ಸಿ. ಕೃಷ್ಣಯ್ಯ ಚೆಟ್ಟಿ ಅಂಡ್ ಸನ್ಸ್ ಕಂಪನಿ ಚಿನ್ನಾಭರಣಗಳ ಮಳಿಗೆಯ ನಿರ್ದೇಶಕ ಸಿ. ಗಣೇಶ್ ನಾರಾಯಣ ಮತ್ತು ಅವರ ಪತ್ನಿ ವಿದ್ಯಾ ನಟರಾಜ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಂಶದ ಮೇಲೆ ಗಮನ ಸೆಳೆದಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅದೇ ಕಂಪನಿಯ ಉದ್ಯೋಗಿ ರಾಜ್‌ದೀಪ್ ದಾಸ್ ಅವರ ಮೇಲೆ ಪೆಪ್ಪರ್ ಸ್ಪ್ರೇ ದಾಳಿ ನಡೆಸಿದ ಆರೋಪದ ಮೇಲೆ ನೀಡಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಏಪ್ರಿಲ್ 30, 2023 ರಂದು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಲ್ಲಿ ದೂರು ದಾಖಲಿಸಲಾಗಿದೆ. ಪ್ರಕರಣದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ತಮ್ಮ ರಕ್ಷಣೆಗಾಗಿ ಪೆಪ್ಪರ್ ಸ್ಪ್ರೆ ಬಳಸಿದ್ದಾರೆ ಮತ್ತು ಅದನ್ನು ಐಪಿಸಿ ಸೆಕ್ಷನ್ 100 ರ ಅಡಿಯಲ್ಲಿ ರಕ್ಷಿಸಲಾಗಿದೆ. ದಾಸ್ ಮತ್ತು ಭದ್ರತಾ ಸಿಬ್ಬಂದಿ ಅರ್ಜಿದಾರರ ಆಸ್ತಿಯಲ್ಲಿ ಹಸ್ತಕ್ಷೇಪ ಮಾಡಲು ಪ್ರಯತ್ನಿಸಿದ್ದರಿಂದ ಹಾಗೆ ಮಾಡಬೇಕಾಯಿತು. ಹೀಗಾಗಿ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ವಾದಿಸಿದರು.

ಸಾಂದರ್ಭಿಕ ಚಿತ್ರ
ಒಂದು ಹುಕ್ಕಾ ಸೇವನೆ 100 ಸಿಗರೇಟು ಸೇವನೆಗೆ ಸಮ: ರಾಜ್ಯ ಸರ್ಕಾರದ ಹುಕ್ಕಾ ಬಾರ್ ನಿಷೇಧ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅದೇ ಕಂಪನಿಯ ಉದ್ಯೋಗಿ ರಾಜ್‌ದೀಪ್ ದಾಸ್ ಅವರ ಮೇಲೆ ಪೆಪ್ಪರ್ ಸ್ಪ್ರೇ ದಾಳಿ ನಡೆಸಿದ ಆರೋಪದ ಮೇಲೆ ನೀಡಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಏಪ್ರಿಲ್ 30, 2023 ರಂದು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಲ್ಲಿ ದೂರು ದಾಖಲಿಸಲಾಗಿದೆ. ಪ್ರಕರಣದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ತಮ್ಮ ರಕ್ಷಣೆಗಾಗಿ ಪೆಪ್ಪರ್ ಸ್ಪ್ರೆ ಬಳಸಿದ್ದಾರೆ ಮತ್ತು ಅದನ್ನು ಐಪಿಸಿ ಸೆಕ್ಷನ್ 100 ರ ಅಡಿಯಲ್ಲಿ ರಕ್ಷಿಸಲಾಗಿದೆ. ದಾಸ್ ಮತ್ತು ಭದ್ರತಾ ಸಿಬ್ಬಂದಿ ಅರ್ಜಿದಾರರ ಆಸ್ತಿಯಲ್ಲಿ ಹಸ್ತಕ್ಷೇಪ ಮಾಡಲು ಪ್ರಯತ್ನಿಸಿದ್ದರಿಂದ ಹಾಗೆ ಮಾಡಬೇಕಾಯಿತು. ಹೀಗಾಗಿ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ವಾದಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com