ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ಕಾರ್ತಿಕೇಯನ್ ಹತ್ಯೆ

ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ದುಷ್ಕರ್ಮಿಗಳು ಮಂಗಳವಾರ ರಾತ್ರಿ ರೌಡಿಶೀಟರ್​ ಕಾರ್ತಿಕೇಯನ್(40) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಕಾರ್ತಿಕೇಯನ್
ಕಾರ್ತಿಕೇಯನ್

ಬೆಂಗಳೂರು: ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ದುಷ್ಕರ್ಮಿಗಳು ಮಂಗಳವಾರ ರಾತ್ರಿ ರೌಡಿಶೀಟರ್​ ಕಾರ್ತಿಕೇಯನ್(40) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ದುಷ್ಕರ್ಮಿಗಳು ಇಂದು ಸಂಜೆ ನಡುರಸ್ತೆಯಲ್ಲೇ ಅಟ್ಟಾಡಿಸಿ ಕಾರ್ತಿಕೇಯನ್​ನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರ್ತಿಕೇಯನ್
ಬೆಂಗಳೂರು: ಸಂಜಯನಗರದಲ್ಲಿ ಹಳೆ ವೈಷಮ್ಯದಿಂದ ಆಟೋ ಚಾಲಕನ ಹತ್ಯೆ

ಹಳೇ ದ್ವೇಷ ಹಾಗೂ ರಿಯಲ್ಎಸ್ಟೇಟ್ ವ್ಯವಹಾರದಲ್ಲಿ ಕಿರಿಕ್ ಆಗಿ ಹತ್ಯೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಈ ಕುರಿತು ಬಾಣಸವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾರ್ತಿಕೇಯನ್ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ನಂತರ ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com