ಲೋಕಸಭಾ ಚುನಾವಣೆ 2024: ಮತದಾನದ ವಿಡಿಯೋ ಪೋಸ್ಟ್ ಮಾಡಿದ ಬಳ್ಳಾರಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲು

ಮತಗಟ್ಟೆಯೊಳಗೆ ಅಕ್ರಮವಾಗಿ ಮೊಬೈಲ್ ಕೊಂಡೊಯ್ದು ಮತದಾನ ಮಾಡುತ್ತಿರುವ ವಿಡಿಯೋ ಪೋಸ್ಟ್ ಮಾಡಿದ ಬಳ್ಳಾರಿ ನಗರ ಪಾಲಿಕೆ ಬಿಜೆಪಿ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.
ಎಫ್ಐಆರ್
ಎಫ್ಐಆರ್

ಬಳ್ಳಾರಿ: ಮತಗಟ್ಟೆಯೊಳಗೆ ಅಕ್ರಮವಾಗಿ ಮೊಬೈಲ್ ಕೊಂಡೊಯ್ದು ಮತದಾನ ಮಾಡುತ್ತಿರುವ ವಿಡಿಯೋ ಪೋಸ್ಟ್ ಮಾಡಿದ ಬಳ್ಳಾರಿ ನಗರ ಪಾಲಿಕೆ ಬಿಜೆಪಿ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.

ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿದ್ದಕ್ಕಾಗಿ ವಾರ್ಡ್ ನಂ.10ರ ಕಾರ್ಪೊರೇಟರ್ ತಿಲಕ್ ಕುಮಾರ್ ಕೆ (38) ವಿರುದ್ಧ ದೂರು ದಾಖಲಿಸಲಾಗಿದೆ.

ಮತದಾನದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಚುನಾವಣಾ ಸಮಿತಿಯ ಫ್ಲೈಯಿಂಗ್ ಸ್ಕ್ವಾಡ್ ತಿಲಕ್ ಅವರ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

ಎಫ್ಐಆರ್
ಮತದಾನ ಗೌಪ್ಯತೆ ಕಾಪಾಡದ ನಿಯಮ ಉಲ್ಲಂಘನೆ: ದಾವಣಗೆರೆ ಬಿಜೆಪಿ ಸಂಸದನ ವಿರುದ್ಧ ಎಫ್‌ಐಆರ್ ದಾಖಲು!

ವಾಸವಿ ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆ ಸಂಖ್ಯೆ 63ರಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀರಾಮುಲು ಅವರಿಗೆ ಮತ ಹಾಕುವ ಮೂಲಕ ನನ್ನ ಕರ್ತವ್ಯವನ್ನು ಮುಗಿಸಿದ್ದೇನೆಂದು ತಿಲಕ್ ಅವರು ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆಂದು ತಿಳಿದುಬಂದಿದೆ.

ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ, ಮತಗಟ್ಟೆಯೊಳಗೆ ಮೊಬೈಲ್ ಫೋನ್ ಕೊಂಡೊಯ್ಯುವುದು ಮತ್ತು ವೀಡಿಯೊ ರೆಕಾರ್ಡಿಂಗ್ ಮಾಡುವುದು ಕಾನೂನುಬಾಹಿರವಾಗಿದೆ. ಇದೀಗ ವಿಡಿಯೋ ಪೋಸ್ಟ್ ಮಾಡಿದ ಕಾರ್ಪೊರೇಟರ್ ತಿಲಕ್ ಅವರ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com