32 ಕೋಟಿ ರೂ. ಮೌಲ್ಯದ 62 ಬಿಟ್ ಕಾಯಿನ್ ಕಳ್ಳತನ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ ಬಂಧನ: ಗೃಹ ಸಚಿವ ಪರಮೇಶ್ವರ

32 ಕೋಟಿ ಮೌಲ್ಯದ 62 ಬಿಟ್‌ಕಾಯಿನ್‌ಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪಾತ್ರ ಪತ್ತೆಯಾಗಿದ್ದು, ತುಮಕೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಗೃಹ ಸಚಿವ ಜಿ ಪರಮೇಶ್ವರ
ಗೃಹ ಸಚಿವ ಜಿ ಪರಮೇಶ್ವರ

ಬೆಂಗಳೂರು: 32 ಕೋಟಿ ಮೌಲ್ಯದ 62 ಬಿಟ್‌ಕಾಯಿನ್‌ಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪಾತ್ರ ಪತ್ತೆಯಾಗಿದ್ದು, ತುಮಕೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ತಿಳಿಸಿದ್ದಾರೆ.

ತುಮಕೂರಿನಲ್ಲಿ 32 ಕೋಟಿ ರೂಪಾಯಿ ಮೌಲ್ಯದ ಬಿಟ್‌ಕಾಯಿನ್ ವಹಿವಾಟು ನಡೆದಿದೆ ಎಂದು ಪರಮೇಶ್ವರ ಹೇಳಿದ್ದಾರೆ.

"ಪ್ರಕರಣದ ತನಿಖೆ ಮಾಡಲು, ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಅಲ್ಲಿಗೆ ಕರೆದೊಯ್ಯಲಾಗಿತ್ತು ಮತ್ತು ಆತನ ಪಾತ್ರ ದೃಢಪಟ್ಟ ನಂತರಬಂಧಿಸಲಾಗಿದೆ" ಎಂದು ಸೋಮವಾರ ರಾತ್ರಿ ಬಂಧಿಸಲಾದ ಶ್ರೀಕಿ ಬಗ್ಗೆ ಗೃಹ ಸಚಿವರು ಮಾಹಿತಿ ನೀಡಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ
1 ಕೋಟಿ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ ಕಳ್ಳತನ ಪ್ರಕರಣ: ಹ್ಯಾಕರ್ ಶ್ರೀಕಿ ಬಂಧನ

"32 ಕೋಟಿ ರೂಪಾಯಿ ಮೌಲ್ಯದ 62 ಬಿಟ್‌ಕಾಯಿನ್ ವಹಿವಾಟು ಈ ಹಿಂದೆ ನಡೆದಿವೆ ಮತ್ತು ಅದರಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಿಟ್‌ಕಾಯಿನ್ ಹಗರಣದ ತನಿಖೆಗೆ ಪ್ರತ್ಯೇಕ ಎಸ್‌ಐಟಿ ರಚಿಸಲಾಗಿದ್ದು, ತನಿಖೆ ತ್ವರಿತ ಗತಿಯಲ್ಲಿ ನಡೆಯುತ್ತಿದೆ ಎಂದು ಸಚಿವರು ವಿವರಿಸಿದರು.

ಇದು ಅತ್ಯಂತ ಗಂಭೀರ ಬೆಳವಣಿಗೆಯಾಗಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸದ ಮತ್ತೊಂದು ಬಿಟ್ ಕಾಯಿನ್ ಹಗರಣದ ಬಗ್ಗೆಯೂ ಕೇಂದ್ರ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com