ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ನ್ಯಾಯಾಂಗ ತನಿಖೆಗೆ ಜೆಡಿಎಸ್ ಆಗ್ರಹ, ಮೈಸೂರಿನಲ್ಲಿ ಪ್ರತಿಭಟನೆಗೆ ಮುಂದು!

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳದ ಆರೋಪ ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ಜೆಡಿಎಸ್, ಇದಗ ಪಕ್ಷದ ಪ್ರತಿಷ್ಠೆಯನ್ನು ಉಳಿಸುವ ಪ್ರಯತ್ನ ನಡೆಸುತ್ತಿದ್ದು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಮಂಡ್ಯದಲ್ಲಿ ಮಂಗಳವಾರ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಮಂಡ್ಯದಲ್ಲಿ ಮಂಗಳವಾರ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳದ ಆರೋಪ ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ಜೆಡಿಎಸ್, ಇದಗ ಪಕ್ಷದ ಪ್ರತಿಷ್ಠೆಯನ್ನು ಉಳಿಸುವ ಪ್ರಯತ್ನ ನಡೆಸುತ್ತಿದ್ದು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು, ಹಾಲಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಬೇಕು ಹಾಗೂ ಪೆನ್‌ಡ್ರೈವ್ ಹಂಚಿದವರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ್ದನ್ನು ಮೊದಲ ದಿನವೇ ಜೆಡಿಎಸ್‌ ಸ್ವಾಗತಿಸಿದ್ದು, ನ್ಯಾಯ ಸಮ್ಮತ ತನಿಖೆಗೆ ಒತ್ತಾಯಿಸಿದ್ದೆವು. ಆದರೆ, ಇಡೀ ಪ್ರಕರಣ ವನ್ನು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಡಿಕೆ ಶಿವಕುಮಾರ್ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಮಂಡ್ಯದಲ್ಲಿ ಮಂಗಳವಾರ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬಿದ ಜೆಡಿಎಸ್ ನಾಯಕರು

ಪ್ರಕರಣದಲ್ಲಿ ಪೆನ್ ಡ್ರೈವ್ ಹಂಚಿದವರು ಸಹ ಶಿಕ್ಷೆಗೆ ಅರ್ಹರು. ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್‌ಡ್ರೈವ್ ಬಿಡುಗಡೆಯಲ್ಲಿ ಡಿಕೆ ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಕೂಡಲೇ ಅವರು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಶಿವರಾಮೇಗೌಡ, ಡಿಕೆಶಿ ಆಡಿಯೊ ಬಗ್ಗೆ ಕೂಡ ನ್ಯಾಯಾಂಗ ತನಿಖೆಯಾಗಬೇಕು ಎಂದು ಹೇಳಿದರು.

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಕಲ್ಪಿಸಬೇಕೆಂದು ಒತ್ತಾಯಿಸಿ, ಸಂತ್ರಸ್ತೆಯ ಅಪಪ್ರಚಾರ ಖಂಡಿಸಿ ಜೆಡಿಎಸ್ ವತಿಯಿಂದ ಮೇ 8ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಅಂತೆಯೇ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲೂ ಅಂದು ಬೆಳಗ್ಗೆ 11ಕ್ಕೆ ಪ್ರತಿಭಟನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com