ನಾಳೆ SSLC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳು ಈ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಿ...
ಬೆಂಗಳೂರು: ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ.
ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ಸರ್ಕಾರದ ಎಸ್ ಎಸ್ ಎಲ್ ಸಿ ಪರೀಕ್ಷೆ 2024 ಮಾರ್ಚ್ 25 ರಿಂದ ಏಪ್ರಿಲ್ 6ರ ನಡುವೆ ನಡೆಯಿತು. ಈ ಬಾರಿ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರಿದ್ದರು. ಇದಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕೂಡ ಇವರಲ್ಲೇ ಸೇರಿಕೊಂಡು ಪರೀಕ್ಷೆ ಬರೆದಿದ್ದಾರೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ