ಸಿಎಂ ಮತ್ತು ಡಿಸಿಎಂ ವಿರುದ್ಧ ಅಪ ಪ್ರಚಾರದ ಪೋಸ್ಟರ್: ನಗರ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು

ಬೆಂಗಳೂರು ಕೇಂದ್ರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ ಪ್ರಕಾಶ್ ಅವರು ಘಟನೆಯ ಹಿಂದೆ ಕೆಲವು ರಾಜಕಾರಣಿಗಳ ಪಿತೂರಿ ಇರುವುದರಿಂದ ತನಿಖೆ ನಡೆಸಬೇಕು. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಮಹಾನಗರ ಬೆಂಗಳೂರಿನ ಹಲವೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಚಿತ್ರಗಳಿರುವ ಪೋಸ್ಟರ್‌ಗಳನ್ನು ಅಂಟಿಸಿರುವ ದುಷ್ಕರ್ಮಿಗಳು, ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರದ ಕಾಂಗ್ರೆಸ್ ಘಟಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

ಬೆಂಗಳೂರು ಕೇಂದ್ರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ ಪ್ರಕಾಶ್ ಅವರು ಘಟನೆಯ ಹಿಂದೆ ಕೆಲವು ರಾಜಕಾರಣಿಗಳ ಪಿತೂರಿ ಇರುವುದರಿಂದ ತನಿಖೆ ನಡೆಸಬೇಕು. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಆಯುಕ್ತರಿಗೆ ದೂರು ನೀಡಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್
ಪೆನ್ ಡ್ರೈವ್ ವಿಡಿಯೋ ಪ್ರಕರಣದ ಹಿಂದೆ ದೇವರಾಜೇಗೌಡ ಕೈವಾಡ: ಕಾಂಗ್ರೆಸ್

ದೇವರಾಜೇಗೌಡ ವಿರುದ್ಧ ದೂರು: ಬೆಂಗಳೂರು ಪಶ್ಚಿಮ ಪ್ರಚಾರ ಸಮಿತಿ ಅಧ್ಯಕ್ಷ ಪುಟ್ಟರಾಜು ವೈ ನೇತೃತ್ವದ ಕಾಂಗ್ರೆಸ್‌ನ ಮತ್ತೊಂದು ನಿಯೋಗ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com