ಶಿವಮೊಗ್ಗದಲ್ಲಿ ಹಾಡಹಗಲೇ ಡಬಲ್‌ ಮರ್ಡರ್‌; ಇಬ್ಬರು ಯುವಕರ ಬರ್ಬರ ಹತ್ಯೆ

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಹಾಡಹಗಲೇ ಡಬಲ್‌ ಮರ್ಡರ್‌ ನಡೆದಿದ್ದು, ಇಬ್ಬರು ಮುಸ್ಲಿಂ ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಹಾಡಹಗಲೇ ಡಬಲ್‌ ಮರ್ಡರ್‌
ಶಿವಮೊಗ್ಗದಲ್ಲಿ ಹಾಡಹಗಲೇ ಡಬಲ್‌ ಮರ್ಡರ್‌

ಶಿವಮೊಗ್ಗ: ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಹಾಡಹಗಲೇ ಡಬಲ್‌ ಮರ್ಡರ್‌ ನಡೆದಿದ್ದು, ಇಬ್ಬರು ಮುಸ್ಲಿಂ ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹತ್ಯೆಯಾದ ಯುವಕರನ್ನು ಗೌಸ್(30) ಮತ್ತು ಶೋಹೆಬ್(35) ಎಂದು ಗುರುತಿಸಲಾಗಿದೆ. ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಇಬ್ಬರ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಯಾದ ಈ ಇಬ್ಬರು ರೌಡಿ ಶೀಟರ್ ಗಳಾಗಿದ್ದು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಶಿವಮೊಗ್ಗದಲ್ಲಿ ಹಾಡಹಗಲೇ ಡಬಲ್‌ ಮರ್ಡರ್‌
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ಕಾರ್ತಿಕೇಯನ್ ಹತ್ಯೆ

ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

ಸ್ಥಳಕ್ಕೆ ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಹೆಚ್ಚುವರಿ ಎಸ್‌ಪಿ ಅನಿಲ್‌ಕುಮಾರ್‌ ಭೂಮರಡ್ಡಿ ಭೇಟಿ ನೀಡಿ ಪರಿಶೀಲಿಸಿದರು. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com